ಕೇಂದ್ರದ ಎಪಿಎಂಸಿ ಕಾಯ್ದೆ ವಾಪಸ್ ಪಡೆಯಲು ನಿರ್ಧಾರ.

ಬೆಂಗಳೂರು,7,2023(www.justkannada.in):  ಕೇಂದ್ರ ಸರ್ಕಾರದ ಎಪಿಎಂಸಿ ಕಾಯ್ದೆ ವಾಪಸ್ ಪಡೆಯಲು ನಿರ್ಧಾರ ನಿರ್ಧರಿಸಲಾಗಿದೆ ಎಂದು ಬಜೆಟ್ ನಲ್ಲಿ ಸಿಎಂ ಸಿದ್ಧರಾಮಯ್ಯ ಘೋಷಿಸಿದರು.

ಇಂದು ವಿಧಾನಸಭೆಯಲ್ಲಿ ಬಜೆಟ್ ಮಂಡಿಸಿದ ಸಿಎಂ ಸಿದ‍್ಧರಾಮಯ್ಯ,  ರೈತರ ಹಿತದೃಷ್ಟಿಯಿಂದ ಕೇಂದ್ರದ ತಿದ್ದುಪಡಿ ಎಪಿಎಂಸಿ ಕಾಯ್ದೆ ವಾಪಸ್‌ ಪಡೆಯಲು ನಿರ್ಧಾರ ಮಾಡಲಾಗಿದೆ .  ಹಿಂದಿನ ಸರ್ಕಾರದ ನೀರಾವರಿ ಯೋಜನೆಯನ್ನ ಕೈ ಬಿಡಲು ಸರ್ಕಾರ ನಿರ್ಧಾರ ಮಾಡಿದೆ. 19 ಕೆರೆ ತುಂಬಿಸುವ ಯೋಜನೆಗೆ ಬರೊಬ್ಬರಿ 770 ಕೋಟಿ ರೂಪಾಯಿ ಮೀಸಲಿಡಲಾಗಿದೆ. ಯಾದಗಿರಿ ಸೇರಿ 15 ಜಿಲ್ಲೆಯ 99 ಕೆರೆಗಳಿಗೆ ನೀರು ತುಂಬಿಸಲು ಯೋಜನೆ ಜಾರಿ ಮಾಡಲಾಗಿದ್ದು, ಎತ್ತಿನ ಹೊಳೆ ಯೋಜನೆಗೆ ಪರಿಷ್ಕೃತ ಮೊತ್ತ 22,252 ಕೋಟಿ ಮೀಸಲಿಡಲಾಗಿದೆ. ಇನ್ನು ಮೇಕೆದಾಟು ಯೋಜನೆಗೆ ಭೂಸ್ವಾಧಿನ ಪ್ರಕ್ರಿಯೆಗೆ ಚಾಲನೆ ನೀಡಲು ನಿರ್ಧಾರ ಮಾಡಲಾಗಿದೆ ಎಂದರು.

Key words: Center’- APMC Act- decision – withdraw-budget-CM-Siddaramaiah