Saturday, September 19, 2026

BDA Apartments

ಮೀಸಲಾತಿ ಹೆಚ್ಚಳದ ರಾಜ್ಯ ಬಿಜೆಪಿಯ ಬಲೂನ್ ಗೆ ಕೇಂದ್ರ ಬಿಜೆಪಿ ಸರ್ಕಾರವೇ ಸೂಜ...
Home Front Page ಮೀಸಲಾತಿ ಹೆಚ್ಚಳದ ರಾಜ್ಯ ಬಿಜೆಪಿಯ ಬಲೂನ್ ಗೆ ಕೇಂದ್ರ ಬಿಜೆಪಿ ಸರ್ಕಾರವೇ ಸೂಜಿ ಚುಚ್ಚಿದೆ- ಸಿದ್ಧರಾಮಯ್ಯ...

ಮೀಸಲಾತಿ ಹೆಚ್ಚಳದ ರಾಜ್ಯ ಬಿಜೆಪಿಯ ಬಲೂನ್ ಗೆ ಕೇಂದ್ರ ಬಿಜೆಪಿ ಸರ್ಕಾರವೇ ಸೂಜಿ ಚುಚ್ಚಿದೆ- ಸಿದ್ಧರಾಮಯ್ಯ ವ್ಯಂಗ್ಯ.

ಬೆಂಗಳೂರು,ಡಿಸೆಂಬರ್,10,2022(www.justkannada.in):  ಮೀಸಲಾತಿ ಪ್ರಮಾಣವನ್ನು 50%ಕ್ಕಿಂತ ಹೆಚ್ಚಿಸುವ ಪ್ರಸ್ತಾಪ ಇಲ್ಲವೆಂದು ಲೋಕಸಭೆಯಲ್ಲಿ ಕೇಂದ್ರ ಸಚಿವರೇ ಹೇಳುವ ಮೂಲಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳದ ರಾಜ್ಯ ಬಿಜೆಪಿ ನಾಯಕರ ಬಲೂನ್ ಗೆ ಕೇಂದ್ರ ಬಿಜೆಪಿ ಸರ್ಕಾರವೇ ಸೂಜಿ ಚುಚ್ಚಿದೆ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಟೀಕಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿದ್ಧರಾಮಯ್ಯ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳದ ನಿರ್ಧಾರ ಹಿಂದೆ ಇದ್ದದ್ದು ಆ ಸಮುದಾಯದ ಬಗೆಗಿನ ಕಾಳಜಿ ಅಲ್ಲ, ಅದು ರಾಜಕೀಯ ಲಾಭದ ದುರುದ್ದೇಶ ಮಾತ್ರ ಎನ್ನುವುದನ್ನು ನಾವು ಹೇಳುತ್ತಲೇ ಬಂದಿದ್ದೇವೆ. ಈಗ ಕೇಂದ್ರ ಬಿಜೆಪಿ ಸರ್ಕಾರವೇ ರಾಜ್ಯ ಬಿಜೆಪಿಯ ಬಣ್ಣ ಬಯಲು ಮಾಡಿದೆ.

ಶೇಕಡಾ 50ರ ಒಟ್ಟು ಮೀಸಲಾತಿ ಪ್ರಮಾಣದ ಮಿತಿಯನ್ನು ಕಿತ್ತುಹಾಕದೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಮಾಣವನ್ನು ಹೇಗೆ ಹೆಚ್ಚಿಸಲು ಸಾಧ್ಯ? ಕೆಲವರನ್ನು ಕೆಲವು ಕಾಲ ಮರುಳು ಮಾಡಬಹುದು, ಎಲ್ಲರನ್ನೂ ಎಲ್ಲ ಕಾಲದಲ್ಲಿಯೂ ಮರುಳು ಮಾಡಲು ಸಾಧ್ಯವಿಲ್ಲ ಸಿಎಂ ಬೊಮ್ಮಾಯಿ ಅವರೇ ಎಂದು ಸಿದ್ಧರಾಮಯ್ಯ ಟಾಂಗ್ ನೀಡಿದ್ದಾರೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಹೆಚ್ಚಿಸುವ ಮತ್ತು ಕಡಿಮೆ ಮಾಡುವ ಅಧಿಕಾರ ಕೇಂದ್ರೆ ಸರ್ಕಾರಕ್ಕೆ ಮಾತ್ರ ಇರುವುದರಿಂದ ರಾಜ್ಯ ಬಿಜೆಪಿ ಸರ್ಕಾರ ಮೊದಲು ಇದನ್ನು ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಕೊಟ್ಟು ಒಪ್ಪಿಸಬೇಕಿತ್ತು. ಈ ಕರ್ತವ್ಯದಲ್ಲಿ ರಾಜ್ಯ ಸರ್ಕಾರ ಸೋತಿದೆ.ಮೀಸಲಾತಿ ಹೆಚ್ಚಳದ ರಾಜ್ಯ ಬಿಜೆಪಿಯ ಬಲೂನ್ ಗೆ ಕೇಂದ್ರ ಬಿಜೆಪಿ ಸರ್ಕಾರವೇ ಸೂಜ...

ಪರಿಶಿಷ್ಟ ಜಾತಿ ಮತ್ತು ಪಂಗಡದ ಬಗ್ಗೆ ರಾಜ್ಯ ಬಿಜೆಪಿಗೆ ಕಾಳಜಿ ಇದ್ದಿದ್ದರೇ ತಕ್ಷಣ ಪ್ರಧಾನಿ ಮೋದಿ ಅವರನ್ನ ಭೇಟಿ ಮಾಡಿ ಮೀಸಲಾತಿ ಹೆಚ್ಚಳಕ್ಕೆ ಕೈಗೊಳ್ಳಬೇಕಾಗಿರುವ ಉಪಕ್ರಮಗಳ ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರ ಶುರುಮಾಡುವಂತೆ ಮನವರಿಕೆ ಮಾಡಿಕೊಡಬೇಕು. ಮತ್ತೆ ಯಾವ ಕರ್ಮಕ್ಕೆ ಡಬಲ್ ಎಂಜಿನ್ ಸರ್ಕಾರ..? ಎಂದು ಸಿದ್ಧರಾಮಯ್ಯ ಕಿಡಿಕಾರಿದ್ದಾರೆ.

ಪ್ರಧಾನಿ ಮೋದಿಯವರ ಜೊತೆ ಮಾತನಾಡುವ ಧೈರ್ಯ ಇಲ್ಲದೆ ಇದ್ದರೆ ಸರ್ವಪಕ್ಷಗಳ ನಿಯೋಗವನ್ನು ಕರೆದೊಯ್ಯಲಿ, ಮೀಸಲಾತಿ ಹೆಚ್ಚಳದ ಅವಶ್ಯಕತೆ ಬಗ್ಗೆ ನಾವು ಪ್ರಧಾನಿಯವರಿಗೆ ಮನವರಿಕೆ ಮಾಡಿಕೊಡುತ್ತೇವೆ. ಇದನ್ನು ಬಿಟ್ಟು ಕೇವಲ ಸುಳ್ಳು ಭರವಸೆಗಳನ್ನು ನೀಡುತ್ತಾ ಬಣ್ಣ ಬಯಲು ಮಾಡಿಕೊಳ್ಳಬೇಡಿ ಎಂದು ಸಿದ್ಧರಾಮಯ್ಯ ಲೇವಡಿ ಮಾಡಿದ್ದಾರೆ.

Key words: central -BJP government -increasing –reservation-former CM-Siddaramaiah