Saturday, October 31, 2026

Dasara Wishes

Happy Dasara
Home Front Page ಯುವಕರಿಗೆ ಗುಡ್ ನ್ಯೂಸ್: 5 ವರ್ಷದಲ್ಲಿ 4.1 ಕೋಟಿ ಉದ್ಯೋಗ – ನಿರ್ಮಲಾ ಸೀತಾರಾಮನ್

ಯುವಕರಿಗೆ ಗುಡ್ ನ್ಯೂಸ್: 5 ವರ್ಷದಲ್ಲಿ 4.1 ಕೋಟಿ ಉದ್ಯೋಗ – ನಿರ್ಮಲಾ ಸೀತಾರಾಮನ್

ನವದೆಹಲಿ,ಜುಲೈ,23,2024 (www.justkannada.in): ಯುವಕರ ಹೊಸ ಉದ್ಯೋಗಕ್ಕಾಗಿ 5 ಹೊಸ ಯೋಜನೆ ಜಾರಿ ಮಾಡಲಾಗುತ್ತದೆ. 5 ವರ್ಷದಲ್ಲಿ 4.1 ಕೋಟಿ ಯುವಕರಿಗೆ ಉದ್ಯೋಗ ಕಲ್ಪಿಸಲು ಒತ್ತು ನೀಡಲಾಗುತ್ತದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದರು.

ಇಂದು ಲೋಕಸಭೆಯಲ್ಲಿ 2024-25ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿ ಮಾತನಾಡಿದ ನಿರ್ಮಲಾ ಸೀತಾರಾಮನ್,  5 ವರ್ಷಗಳಲ್ಲಿ 4.1 ಕೋಟಿ ಯುವಕರಿಗೆ ಉದ್ಯೋಗ, ಕೌಶಲ್ಯ ಮತ್ತು ಇತರ ಅವಕಾಶಗಳನ್ನು ಒದಗಿಸುವ 5 ಯೋಜನೆಗಳು ಮತ್ತು ಉಪಕ್ರಮಗಳಿಗೆ ಪ್ರಧಾನ ಮಂತ್ರಿಗಳ ಪ್ಯಾಕೇಜ್ ಅನ್ನು ಘೋಷಿಸಲು ಸಂತೋಷವಾಗಿದೆ ಎಂದರು.ಯುವಕರಿಗೆ ಗುಡ್ ನ್ಯೂಸ್: 5 ವರ್ಷದಲ್ಲಿ 4.1 ಕೋಟಿ ಉದ್ಯೋಗ – ನಿರ್ಮಲಾ ಸೀತಾರಾಮನ್...

ಸರ್ಕಾರದ ಒಂಬತ್ತು ಆದ್ಯತೆಗಳಲ್ಲಿ ಒಂದು ಉದ್ಯೋಗ ಮತ್ತು ಕೌಶಲ್ಯ ಅಭಿವೃದ್ಧಿ. ಇದರ ಅಡಿಯಲ್ಲಿ, ಮೊದಲ ಬಾರಿಗೆ ಉದ್ಯೋಗಾಕಾಂಕ್ಷಿಗಳಾಗಿರುವವರಿಗೆ ದೊಡ್ಡ ಸಹಾಯ ದೊರೆಯಲಿದೆ. ಔಪಚಾರಿಕ ವಲಯದಲ್ಲಿ ಮೊದಲ ಬಾರಿಗೆ ಉದ್ಯೋಗ ಆರಂಭಿಸುವವರಿಗೆ ಒಂದು ತಿಂಗಳ ವೇತನವನ್ನು ಸರ್ಕಾರದ ವತಿಯಿಂದ ನೀಡಲಾಗುವುದು. ಈ ವೇತನವನ್ನು ನೇರ ನಗದು ವರ್ಗಾವಣೆ ಮೂಲಕ ಮೂರು ಕಂತುಗಳಲ್ಲಿ ಬಿಡುಗಡೆ ಮಾಡಲಾಗುವುದು. ಇದರ ಗರಿಷ್ಠ ಮೊತ್ತ 15 ಸಾವಿರ ರೂ. ಇಪಿಎಫ್​ ಒನಲ್ಲಿ ನೋಂದಾಯಿಸಲ್ಪಟ್ಟವರು ಈ ಭತ್ಯೆ ಪಡೆಯಲಿದ್ದಾರೆ. ಇದರಿಂದ 2.10 ಕೋಟಿ ಯುವಕರಿಗೆ ಅನುಕೂಲವಾಗಲಿದೆ ಎಂದು ನಿರ್ಮಲಾ ಸೀತಾರಾಮನ್  ತಿಳಿಸಿದರು.

Key words: Central Budget, 4.1 crore,  jobs, Nirmala Sitharaman