ಫೆ.1ರಂದು ಕೇಂದ್ರ ಬಜೆಟ್ ಮಂಡನೆ: ಸರ್ವಪಕ್ಷಗಳ ಸಭೆ ಕರೆದ ಕೇಂದ್ರ ಸರ್ಕಾರ.

ನವದೆಹಲಿ,ಜನವರಿ,30,2023(www.justkannada.in): ನಾಳೆಯಿಂದ  ಸಂಸತ್ತಿನ ಬಜೆಟ್ ಅಧಿವೇಶನ ಆರಂಭವಾಗಲಿದ್ದು ಫೆಬ್ರವರಿ 1ರಂದು ಕೇಂದ್ರ ಬಜೆಟ್ ಮಂಡನೆಯಾಗಲಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ  ಇಂದು ಸರ್ವಪಕ್ಷ ಸಭೆಯನ್ನು ಕರೆದಿದೆ.

ಸಂಸತ್ ಭವನದ ಸಂಕೀರ್ಣದಲ್ಲಿ ಮಧ್ಯಾಹ್ನ 12 ಗಂಟೆಗೆ ಸರ್ವಪಕ್ಷಗಳ ಸಭೆ ನಡೆಯಲಿದೆ. ಸಂಸತ್ತಿನ ಅಧಿವೇಶನವನ್ನು ಸುಗಮವಾಗಿ ನಡೆಸಲು ಸರ್ಕಾರವು ಎಲ್ಲಾ ಪಕ್ಷಗಳಿಂದ ಸಹಕಾರವನ್ನು ಪಡೆಯುವ ಸಾಧ್ಯತೆಯಿದೆ. ಫೆಬ್ರವರಿ 1 ರಂದು 2024 ರ ಲೋಕಸಭೆ ಚುನಾವಣೆಗೆ ಮೊದಲು ಮೋದಿ ಸರ್ಕಾರವು ತನ್ನ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಅನ್ನು ಮಂಡಿಸಲು ಸಿದ್ಧವಾಗಿದೆ. ಬಜೆಟ್ ಅಧಿವೇಶನವು ಎರಡು ಭಾಗಗಳಲ್ಲಿ ನಡೆಯಲಿದೆ.

ಫೆಬ್ರವರಿ 1 ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ ಅನ್ನು ಲೋಕಸಭೆಯಲ್ಲಿ ಮಂಡಿಸಲಿದ್ದಾರೆ.

Key words: Central budget – February 1-all-party- meeting-today