ಬೆಂಗಳೂರು,ಅಕ್ಟೋಬರ್,20,2026 (www.justkannada.in): ಇಡೀ ದೇಶದಲ್ಲಿ ಕಬ್ಬು ಬೆಳೆಗಾರರಿಗೆ ನ್ಯಾಯ ದೊರಕಿಸಿಕೊಟ್ಟಿದ್ದು ನರೇಂದ್ರ ಮೋದಿ ಅವರ ನೇತೃತ್ವದ ಎನ್ ಡಿಎ ಸರ್ಕಾರ. ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ,, ಮೋದಿ ಅವರು ಬಂದ ಮೇಲೆ ಎಂಎಸ್ ಪಿ ತಂದರು. ಎಥೆನಾಲ್ ಉತ್ಪಾದನೆಗೆ ಅವಕಾಶ ನೀಡಿದರು. ಕಬ್ಬು ಅರೆಯುವ ಕಾರ್ಖಾನೆಗಳಿಗೆ ಅನುಕೂಲ ಆಗುವ ನೀತಿಯನ್ನು ಜಾರಿ ಮಾಡಿದ್ದಾರೆ. ಹಣಕಾಸು ಸಹಾಯ ಸೇರಿದಂತೆ ಹಲವು ರೀತಿಯಲ್ಲಿ ಅನುಕೂಲ ಮಾಡಿದ್ದಾರೆ ಎಂದರು.
ಕಬ್ಬು ಬೆಳೆಗಾರರು ಅನೇಕ ಬೇಡಿಕೆ ಮುಂದಿಟ್ಟು ಪ್ರತಿಭಟನೆ ನಡೆಸುತ್ತಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಈಗಾಗಲೇ ಸಮಿತಿ ರಚನೆ ಮಾಡಿದ್ದಾರೆ. ಆ ಸಮಿತಿ ರಾಜ್ಯಕ್ಕೆ ಭೇಟಿ ನೀಡುತ್ತಿದೆ. ಕಬ್ಬಿನ ಸಮಸ್ಯೆ ರಾಜ್ಯಕ್ಕೆ ಮಾತ್ರವಲ್ಲ ಕೇಂದ್ರಕ್ಕೂ ಸೀಮಿತ ಕೇಂದ್ರ ಸರ್ಕಾರ ಗಮನ ಹರಿಸಿದೆ ಎಂದರು.






