ನವದೆಹಲಿ,ಡಿಸೆಂಬರ್,12,2025 (www.justkannada.in): ದೇಶಾದ್ಯಂತ ಎರಡು ಹಂತಗಳಲ್ಲಿ ಜನಗಣತಿ ನಡೆಸಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ.
ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಜನಗಣತಿಗೆ ಅನುಮೋದನೆ ನೀಡಲಾಗಿದೆ. ಈ ಕುರಿತು ಮಾಹಿತಿ ನೀಡಿದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, 2026-27ರಲ್ಲಿ ಕೇಂದ್ರ ಸರ್ಕಾರದಿಂದ ಜನಗಣತಿ ಮಾಡಲಾಗುತ್ತದೆ. ಇದಕ್ಕಾಗಿ 11,718 ಕೋಟಿ ರೂ ಹಣ ಮೀಸಲಿಡಲಾಗಿದೆ. ಡಿಜಿಟಲ್ ಮೂಲಕ ಮೊಬೈಲ್ ಆಫ್ ಮೂಲಕ ಎರಡು ಹಂತದಲ್ಲಿ ಜನಗಣತಿ ನಡೆಸಲಾಗುತ್ತದೆ ಎಂದರು.
2026ರ ಏಪ್ರಿಲ್ ನಿಂದ ಸೆಪ್ಟಂಬರ್ ರವರೆಗೆ ಮೊದಲ ಹಂತ , 2027ರ ಫೆಬ್ರವರಿಯಿಂದ ಮಾರ್ಚ್ ವರೆಗೆ ಎರಡನೇ ಹಂತದಲ್ಲಿ ಜನಗಣತಿ ನಡೆಯಲಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದರು. ಈ ನಡುವೆ ಜನಗಣತಿ ಜೊತೆಗೆ ಜಾತಿಗಣತಿಯನ್ನೂ ನಡೆಸುವುದಾಗಿ ಈ ಹಿಂದೆ ಕೇಂದ್ರ ಸರ್ಕಾರ ಹೇಳಿತ್ತು.
Key words: central government, two-phase, census, country







