Sunday, August 23, 2026

BDA Apartments

Home Front Page ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ತುಟ್ಟಿ ಭತ್ಯೆ ಶೇ 3ರಷ್ಟು ಹೆಚ್ಚಳ

ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ತುಟ್ಟಿ ಭತ್ಯೆ ಶೇ 3ರಷ್ಟು ಹೆಚ್ಚಳ

ನವದೆಹಲಿ,ಅಕ್ಟೋಬರ್,16,2024 (www.justkannada.in): ದೀಪಾವಳಿ ಹಬ್ಬದ ಸಂಭ್ರಮಕ್ಕೂ ಮುನ್ನವೇ ಕೇಂದ್ರ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದ್ದು ಶೇ 3ರಷ್ಟು ತುಟ್ಟಿ ಭತ್ಯೆ ಹೆಚ್ಚಳ ಮಾಡಿದೆ.

ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಕೇಂದ್ರ ಸರ್ಕಾರಿ ನೌಕರರ ಶೇ 3ರಷ್ಟು ತುಟ್ಟಿ ಭತ್ಯೆ ಹೆಚ್ಚಳ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ವರ್ಷದ ಜುಲೈ 1ರಿಂದಲೇ ಇದು ಪೂರ್ವಾನ್ವಯವಾಗಲಿದೆ.

ಈ ಮೂಲಕ ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಮೂಲ ವೇತನದ ಶೇ 53ರಷ್ಟಾಗಿದೆ. ಈ ವರ್ಷದ ಮಾರ್ಚ್ ತಿಂಗಳಲ್ಲಿ ಶೇ 4ರಷ್ಟು ತುಟ್ಟಿ ಭತ್ಯೆ ಹೆಚ್ಚಳವಾಗಿತ್ತು.  ತುಟ್ಟಿ ಭತ್ಯೆ ಹೆಚ್ಚಳದಿಂಧ ಕೇಂದ್ರಕ್ಕೆ ₹ 9,448 ಕೋಟಿ ಹೊರೆಯಾಗಲಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ತಿಳಿಸಿದ್ದಾರೆ.

Key words: central government, employees, DA, increased