ಕನ್ನಡಿಗರ ಮೇಲೆ ಕೇಂದ್ರ ಸರ್ಕಾರಕ್ಕೆ ‌ಯಾಕೆ ಇಷ್ಟೊಂದು ದ್ವೇಷ? ಸಚಿವ ಪ್ರಿಯಾಂಕ್​ ಖರ್ಗೆ ಅಸಮಾಧಾನ.

ಬೆಂಗಳೂರು,ಜೂನ್,19,2023(www.justkannada.in): ಹೆಚ್ಚುವರಿ ಅಕ್ಕಿ ಪೂರೈಸಲು ನಿರಾಕರಿಸಿದ ಹಿನ್ನೆಲೆ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿರುವ ಸಚಿವ ಪ್ರಿಯಾಂಕ್ ಖರ್ಗೆ,  ಕನ್ನಡಿಗರ ಮೇಲೆ ಕೇಂದ್ರ ಸರ್ಕಾರಕ್ಕೆ ‌ಯಾಕೆ ಇಷ್ಟೊಂದು ದ್ವೇಷ ಎಂದು ವಾಗ್ದಾಳಿ ನಡೆಸಿದ್ದಾರೆ.

ವಿಧಾನಸೌಧದಲ್ಲಿ ಇಂದು ಮಾತನಾಡಿದ ಸಚಿವ ಪ್ರಿಯಾಂಕ್​ ಖರ್ಗೆ, ಆಡಳಿತ ಹೇಗೆ ಮಾಡೋದು ಅನ್ನೋದು ಬಿಜೆಪಿಗೆ ಮರೆತು ಹೋಗಿದೆ. ಕಾಂಗ್ರೆಸ್ ಟೀಕೆ ಮಾಡುತ್ತಿರೋದಕ್ಕೆ ಜನ ಅವರನ್ನು ಮನೆಗೆ ಕಳಿಸಿದ್ದಾರೆ ಎಂದು ಗುಡುಗಿದರು.

ಎಫ್ ಸಿಐ ಮೊದಲು ಅಕ್ಕಿ ಕೊಡ್ತೇವೆ ಎಂದಿದ್ದರು, ಬಳಿಕ ಕೊಡಲ್ಲ ಅಂತಿದ್ದಾರೆ. ಬಿಜೆಪಿಗೆ ಮತ ಹಾಕಿಲ್ಲ ಎಂದು ಕನ್ನಡಿಗರಿಗೆ ಮೋಸ ಮಾಡ್ತಿದ್ದೀರಾ? ನಾಳೆ ನಡೆಯುವ ಪ್ರತಿಭಟನೆಯಲ್ಲಿ ಬಿಜೆಪಿ ಸಂಸದರು ಕೈಜೋಡಿಸಿ ಎಂದು  ಸಚಿವ ಪ್ರಿಯಾಂಕ್ ಖರ್ಗೆ ಆಗ್ರಹಿಸಿದರು.

Key words: central government – hateful – Kannadigas- Minister- Priyank Kharge