ಅನುದಾನ ಹಂಚಿಕೆಯಲ್ಲಿ ಕೇಂದ್ರ ಅನ್ಯಾಯ: ಬಜೆಟ್ ಬಳಿಕ ಶ್ವೇತಪತ್ರ- ಸಿಎಂ ಸಿದ್ದರಾಮಯ್ಯ.

ನವದೆಹಲಿ,ಫೆಬ್ರವರಿ,7,2024(www.justkannada.in): ಅನುದಾನ ಹಂಚಿಕೆಯಲ್ಲಿ ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಅನ್ಯಾಯವಾಗಿದೆ ಎಂದು ಆರೋಪಿಸಿ ಇಂದು ನವದೆಹಲಿಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದು, ಅನುದಾನ ಹಂಚಿಕೆ ಕುರಿತು ಬಜೆಟ್ ಬಳಿಕ ಶ್ವೇತಪತ್ರ ಹೊರಡಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಕುರಿತು ನವದೆಹಲಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ,  ಭೀಕರ ಬರಗಾಲ ಇದ್ರೂ ಅನುದಾನ ಕೊಟ್ಟಿಲ್ಲ. ಕೇಂದ್ರ ಈವರೆಗೆ ಬರಗಾಲಕ್ಕೆ ಬಿಡುಗಾಸು ಕೊಟ್ಟಿಲ್ಲ. ನಾನೇ ಮೋದಿ ಅಮಿತ್ ಶಾ ಭೇಟಿ ಮಾಡಿದ್ದೇನೆ ಎಂದು ಆರೋಪಿಸಿದರು.

ಭದ್ರ ಮೇಲ್ದಂಡೆ ಯೋಜನೆಗೆ ಬಜೆಟ್ ನಲ್ಲಿ 5300 ಕೋಟಿ ರೂ. ಕೊಡ್ತೇವೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದರು. ಈಗ ನೋಡಿದ್ರೆ ಸುಮ್ಮನಿದ್ದಾರೆ. ನಮ್ಮ ಹೋರಾಟಕ್ಕೆ ಕೇಂದ್ರ ಸ್ಪಂದಿಸುತ್ತೋ ಇಲ್ವೋ ಗೊತ್ತಿಲ್ಲ. ಬಜೆಟ್ ಮಂಡಿಸಿದ ಮೇಲೆ ಶ್ವೇತಪತ್ರ ಹೊರಡಿಸುತ್ತೇವೆ. ಬಿಜೆಪಿಯವರು ದಾರಿ ತಪ್ಪಿಸುತ್ತಿದ್ದಾರೆ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ ಯಾವ ಸಂಸದರೂ ಬಾಯಿ ಬಿಡುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.

Key words: Central -injustice – allocation –grants-White paper- after- budget- CM Siddaramaiah.