ಪ್ರಧಾನಿ ಮೋದಿ ಬಗ್ಗೆ ಖರ್ಗೆ ಹೇಳಿಕೆ ಪ್ರಸ್ತಾಪಿಸಿ ಕಾಂಗ್ರೆಸ್ ವಿರುದ್ಧ ಮತ್ತೆ ಗುಡುಗಿದ ಅಮಿತ್ ಶಾ.

ಬೆಳಗಾವಿ,ಮೇ,6,2023(www.justkannada.in):  ಪ್ರಧಾನಿ ನರೇಂದ್ರ ಮೋದಿ ವಿಷಸರ್ಪದಂತೆ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ಪ್ರಸ್ತಾಪಿಸಿ ಮತ್ತೆ ಕಾಂಗ್ರೆಸ್ ವಿರುದ್ಧ ಕೇಂದ್ರ ಗೃಹಸಚಿವ ಅಮಿತ್ ಶಾ ಗುಡುಗಿದ್ದಾರೆ.

ಬೆಳಗಾವಿಯ ಅಥಣಿಯಲ್ಲಿ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮುಟಳ್ಳಿ ಪರ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಕೇಂದ್ರಗೃಹಸಚಿವ ಅಮಿತ್ ಶಾ, ಭಾರತದ ಜನರು ನರೇಂದ್ರ ಮೋದಿ ನಂಬುತ್ತಾರೆ. ಆದರೆ ಮೋದಿಯವರನ್ನು ಮಲ್ಲಿಕಾರ್ಜುನ ಖರ್ಗೆ ವಿಷದ ಸರ್ಪ ಎಂದು ಹೇಳಿದ್ದಾರೆ. ಖರ್ಗೆಯವರೇ ಮೋದಿಯನ್ನು ಎಷ್ಟು ಟೀಕಿಸುತ್ತೀರೋ ಟೀಕಿಸಿ. ನೀವು ಎಷ್ಟು ಬೈಯ್ಯುತ್ತೀರೋ ಕಮಲ ಅಷ್ಟು ಅರಳುತ್ತದೆ ಎಂದು ಟಾಂಗ್ ನೀಡಿದರು.

ನರೇಂದ್ರ ಮೋದಿಯನ್ನು ಎಷ್ಟು ಬೈದರೂ ನಿಮಗೆ ಹೊಟ್ಟೆ ತುಂಬಿಲ್ಲ. ಅದಕ್ಕೆ ಬಜರಂಗಬಲಿ ವಿರುದ್ಧ ಕಾಂಗ್ರೆಸ್​ ನವರು ನಿಂತಿದ್ದಾರೆ ಎಂದು ಕಿಡಿಕಾರಿದರು.

ಸ್ವಾತಂತ್ರ್ಯ ಹೋರಾಟಗಾರ ವೀರ್ ಸಾವರ್ಕರ್‌ ಅವರನ್ನು ಕಾಂಗ್ರೆಸ್ ಅಪಮಾನ ಮಾಡಿದ್ದಾರೆ.  ಎರಡು ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಏಕೈಕ ಸ್ವಾತಂತ್ರ್ಯ ಹೋರಾಟಗಾರ ವೀರ್ ಸಾವರ್ಕರ್.  ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ  ಸಾವರ್ಕರ್ ಅಪಮಾನ ಮಾಡುತ್ತೀರಿ.  ನೀವು 10 ಜನ್ಮ ಹುಟ್ಟಿಬಂದರೂ ಸಾವರ್ಕರ್‌ ರಂತಹ ಬಲಿದಾನ ನೋಡಲು ಆಗಲ್ಲ ಎಂದು ಅಮಿತ್ ಶಾ ಹೇಳಿದರು.

Key words: central minister- Amit Shah – outrage- Congress