ಬೆಳಗಾವಿಯಲ್ಲಿ ಪ್ರವಾಹ ಪರಿಸ್ಥಿತಿ ಅವಲೋಕಿಸಿದ ನಿರ್ಮಲಾ ಸೀತಾರಾಮನ್: ಮಹಿಳೆಯರ ನೋವು ಆಲಿಸಿದ ಕೇಂದ್ರ ಸಚಿವೆ

ಬೆಳಗಾವಿ, ಆಗಸ್ಟ್ 08, 2019 (www.justkannada.in): ಪ್ರವಾಹ ಪರಿಸ್ಥಿತಿ ಅವಲೋಕನಕ್ಕೆಂದು ಬೆಳಗಾವಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ನೀಡಿದ್ದಾರೆ.

ನಗರದ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು, ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳ ಬಗ್ಗೆ, ಜಿಲ್ಲೆಯಲ್ಲಿ ಆಗಿರುವ ಹಾನಿ ಪ್ರಮಾಣದ ಬಗ್ಗೆ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದರು.

ಬೆಳಗಾವಿ ನಗರದ ನಾನಾ ಕಡೆಗಳಿಗೆ ಅವರು ಭೇಟಿ ನೀಡುತ್ತಿದ್ದು, ಬೆಳಗಾವಿ, ಸಂಕೇಶ್ವರ ಮತ್ತಿತರ ಕಡೆಗಳಲ್ಲಿ ಪರಿಹಾರ ಕೇಂದ್ರಗಳಿಗೆ ಭೇಟಿ ನೀಡುತ್ತಿದ್ದಾರೆ. ಜತೆಗೆ ಸಂತ್ರಸ್ಥ ಕೇಂದ್ರದಲ್ಲಿ ಮಹಿಳೆಯರ ನೋವು ಆಲಿಸಿ ಸಮಾಧಾನ ಪಡಿಸುವ ಪ್ರಯತ್ನ ಮಾಡಿದರು. ಇದಾದ ಬಳಿಕ ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.