ಉಚಿತ ಅಕ್ಕಿ ವಿಚಾರದಲ್ಲೂ ಕೇಂದ್ರ ರಾಜಕೀಯ: ರಾಜ್ಯಕ್ಕೆ ಅಕ್ಕಿ ಕೊಡದಂತೆ ತಡೆ ಹಿಡಿದಿದೆ-ಸಿಎಂ ಸಿದ‍್ಧರಾಮಯ್ಯ ವಾಗ್ದಾಳಿ.

ಬೆಂಗಳೂರು,ಜೂನ್,14,2023(www.justkannada.in): ಉಚಿತ ಅಕ್ಕಿ ವಿಚಾರದಲ್ಲೂ ಕೇಂದ್ರ  ಸರ್ಕಾರ ರಾಜಕೀಯ ಮಾಡುತ್ತಿದೆ.  ರಾಜ್ಯಕ್ಕೆ ಅಕ್ಕಿ ಕೊಡಬಾರದು ಎಂದು  ತಡೆ ಹಿಡಿದಿದೆ. ಬಿಜೆಪಿಯದ್ದು ಬಡವರ ವಿರೋಧಿ ನಡೆ ಎಂದು ಸಿಎಂ ಸಿದ‍್ಧರಾಮಯ್ಯ ವಾಗ್ದಾಳಿ ನಡೆಸಿದರು.

ಇಂದು ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಸಿದ್ಧರಾಮಯ್ಯ,  ಈಗಾಗಲೇ ನಾವು 5 ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದೇವೆ. ಈಗಾಗಲೇ ಒಂದು ಗ್ಯಾರಂಟಿ ಜಾರಿ ಮಾಡಿದ್ದೇವೆ. ಪ್ರತಿಯೊಬ್ಬರಿಗೆ ತಲಾ 10 ಕೆಜಿ ಅಕ್ಕಿ ಕೊಡ್ತೇವೆ ಎಂದು ಹೇಳಿದ್ದೇವೆ. BPL, ಅಂತ್ಯೋದಯ ಕಾರ್ಡ್​ನವರಿಗೆ 10 ಕೆಜಿ ಅಕ್ಕಿ ಕೊಡುತ್ತೇವೆ. ಜುಲೈ 1ರಿಂದ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಹೇಳಿದ್ದೆವು.  ತಿಂಗಳಿಗೆ 2 ಲಕ್ಷದ 28 ಸಾವಿರ ಮೆಟ್ರಿಕ್​ ಟನ್ ಹೆಚ್ಚುವರಿ​ ಅಕ್ಕಿ ಬೇಕು ಎಂದರು.

ಅನ್ನಭಾಗ್ಯ ಯೋಜನೆಗಾಗಿ ತಿಂಗಳಿಗೆ 840 ಕೋಟಿ ರೂ. ವೆಚ್ಚ ಆಗಲಿದೆ. ಪ್ರತಿ ವರ್ಷಕ್ಕೆ 10,092 ಕೋಟಿ ರೂ. ಬೇಕು. ಹೆಚ್ಚುವರಿ ಅಕ್ಕಿ ವಿತರಣೆ ಬಗ್ಗೆ FCI ಡೆಪ್ಯುಟಿ ಮ್ಯಾನೇಜರ್​ ಜೊತೆ ಚರ್ಚೆ ಮಾಡಿದ್ದು, ಹೆಚ್ಚುವರಿ ಅಕ್ಕಿ ಕೊಡುವುದಾಗಿ ಹೇಳಿದ್ದಾರೆ. ಇಷ್ಟೆಲ್ಲ ಆದ್ಮೇಲೆ ಡೆಪ್ಯುಟಿ ಮ್ಯಾನೇಜರ್ ಜೂ.12ರಂದು ಪತ್ರ ಬರೆದಿದ್ದಾರೆ. ಜೂನ್​​ 12ರಂದು ಹೆಚ್ಚುವರಿ ಅಕ್ಕಿ ಕೊಡುವುದಾಗಿ ಒಪ್ಪಿಗೆ ನೀಡಿದ್ದರು. ಇದಾದ ಬಳಿಕ ಕೇಂದ್ರ ಸರ್ಕಾರ ರಾಜಕೀಯ ನಿರ್ಧಾರ ತೆಗೆದುಕೊಂಡಿದೆ. ಉಚಿತ ಅಕ್ಕಿ ವಿಚಾರದಲ್ಲೂ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ. ಡೆಪ್ಯುಟಿ ಮ್ಯಾನೇಜರ್​ 7 ಲಕ್ಷ ಟನ್​ ಅಕ್ಕಿ ಸಂಗ್ರಹ ಇದೆ ಎಂದಿದ್ದರು. ಅಕ್ಕಿ ಸಂಗ್ರಹ ಇದ್ದರೂ ಕೇಂದ್ರ ಯಾಕೆ ಪೂರೈಕೆ ಮಾಡುತ್ತಿಲ್ಲ ಎಂದು ಪ್ರಶ್ನಿಸಿದರು.

ಎಫ್ ಸಿಐ ನವರು ಖಾಸಗಿಯವರಿಗೆ ಅಕ್ಕಿ ಕೊಡುತ್ತಾರೆ. ಆದರೆ ರಾಜ್ಯಕ್ಕೆ ಅಕ್ಕಿ ಕೊಡಲ್ಲ ಅನ್ನುತ್ತಿದ್ದಾರೆ.  ರಾಜ್ಯಕ್ಕೆ  ಅಕ್ಕಿ ಕೊಡದಂತೆ ಕೇಂದ್ರ ಸರ್ಕಾರ ತಡೆ ಹಿಡಿದಿದೆ. ಬಡವರ ವಿರೋಧಿ ಧೋರಣೆ ತೋರುತ್ತಿದೆ ಎಂದು ಸಿದ್ಧರಾಮಯ್ಯ ಕಿಡಿಕಾರಿದರು.

ಕಾಂಗ್ರೆಸ್ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಈ ರೀತಿ ಮಾಡುತ್ತಿದೆ. ಅಕ್ಕಿ ಪೂರೈಸಲು ಛತ್ತೀಸ್​ಗಢ ಸರ್ಕಾರಕ್ಕೂ ಮನವಿ ಮಾಡಿದ್ದೇವೆ. ಬಿಜೆಪಿಯವರು ಬಡವರ ವಿರೋಧಿಗಳು ಎಂದು ಸಿಎಂ ಸಿದ್ದರಾಮಯ್ಯ  ಹರಿಹಾಯ್ದರು.

Key words: Central -politics -matter -free rice – CM Siddhiramaiah