Friday, October 16, 2026

Dasara Wishes

Happy Dasara
Home Front Page ಸಿದ್ದರಾಮಯ್ಯರನ್ನ ಕಾಂಗ್ರೆಸ್ ಹೈಕಮಾಂಡ್ ಅಗೌರವದಿಂದ ನಡೆಸಿಕೊಂಡಿದೆ- ಛಲವಾದಿ ನಾರಾಯಣಸ್ವಾಮಿ

ಸಿದ್ದರಾಮಯ್ಯರನ್ನ ಕಾಂಗ್ರೆಸ್ ಹೈಕಮಾಂಡ್ ಅಗೌರವದಿಂದ ನಡೆಸಿಕೊಂಡಿದೆ- ಛಲವಾದಿ ನಾರಾಯಣಸ್ವಾಮಿ

ಬೀದರ್,ಮೇ,28,2026 (www.justkannada.in): ಸಿಎಂ ಸಿದ್ದರಾಮಯ್ಯರನ್ನ ಕಾಂಗ್ರೆಸ್ ಹೈಕಮಾಂಡ್ ಅಗೌರವದಿಂದ ನಡೆಸಿಕೊಂಡಿದೆ. ಗೌರವದಿಂದ ನಡೆಸಿಕೊಳ್ಳಬೇಕಿತ್ತು ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕುರಿತು ಮಾತನಾಡಿದ ಛಲವಾದಿ ನಾರಾಯಣಸ್ವಾಮಿ,ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಅವರನ್ನು ಅಗೌರವದಿಂದ ನಡೆಸಿಕೊಂಡಿದೆ. ಆದರೆ, ಸಿಎಂ ಸಿದ್ದರಾಮಯ್ಯ ಯಾವುದನ್ನೂ ತೋರಿಸಿಕೊಳ್ಳುತ್ತಿಲ್ಲ. ಕಾಂಗ್ರೆಸ್‌ ನ ಸಂಸ್ಕೃತಿಯೇ ಅದಾಗಿದ್ದು, ಮಾನವೀಯತೆಯಿಂದ ಹೈಕಮಾಂಡ್ ನಡೆದುಕೊಳ್ಳಬೇಕಿತ್ತು. ಆ ರೀತಿ ನಡೆದುಕೊಂಡಿಲ್ಲ. ನನ್ನ ಹೈಕಮಾಂಡ್ ನನ್ನನ್ನು ಗೌರವಿಸಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದಾರೆ ಎಂದರು.

ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲು ಒಂದು ತಿಂಗಳು  ಸಮಯ ನೀಡುವಂತೆ ಕೇಳಿದ್ದಾರೆ ಆದರೆ ಕಾಂಗ್ರೆಸ್ ಹೈಕಮಾಂಡ್ ಒಂದು ದಿನಾನೂ ಇಲ್ಲ ಈಗಲೇ ರಾಜೀನಾಮೆ ನೀಡಿ ಎಂದು ಹೇಳಿದೆ. ಸಿದ್ದರಾಮಯ್ಯಗೆ ಇಂದೇ ರಾಜೀನಾಮೆ ಕೊಡಿ ಅಂತಾ ಹೇಳಿದೆ.   ಕಾಂಗ್ರೆಸ್ ಹೈಕಮಾಂಡ್ ಅಂದರೆ ರಾಹುಲ್ ಒಬ್ಬರೇನಾ? ಖರ್ಗೆ ಯಾರು ? ಎಂದು ಛಲವಾದಿ ನಾರಾಯಣಸ್ವಾಮಿ ಪ್ರಶ್ನಿಸಿದರು.ಸಿದ್ದರಾಮಯ್ಯರನ್ನ ಕಾಂಗ್ರೆಸ್ ಹೈಕಮಾಂಡ್ ಅಗೌರವದಿಂದ ನಡೆಸಿಕೊಂಡಿದೆ- ಛಲವಾ...

Key words: Congress ,high command, Siddaramaiah, Chalavadi Narayanaswamy