Wednesday, August 5, 2026

BDA Apartments

Home Front Page ರಾಜ್ಯದಲ್ಲಿ ಬಿಜೆಪಿಗೆ ಜಯ ನಿಶ್ಚಿತ- ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿ ಜೆ.ಪಿ ನಡ್ಡಾ ವಿಶ್ವಾಸ.

ರಾಜ್ಯದಲ್ಲಿ ಬಿಜೆಪಿಗೆ ಜಯ ನಿಶ್ಚಿತ- ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿ ಜೆ.ಪಿ ನಡ್ಡಾ ವಿಶ್ವಾಸ.

ಚಾಮರಾಜನಗರ, ಮಾರ್ಚ್,1,2023(www.justkannada.in):  ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ  ಬಿಜೆಪಿಗೆ ಜಯ ನಿಶ್ಚಿತ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ವಿಶ್ವಾಸ ವ್ಯಕ್ತಪಡಿಸಿದರು.

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಜೆಪಿ ನಡ್ಡಾ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಮಲೆಮಹದೇಶ್ವರ ಬೆಟ್ಟದಂತಹ ಪುಣ್ಯ ಕ್ಷೇತ್ರದಲ್ಲಿ ಯಾತ್ರೆ ಪ್ರಾರಂಭವಾಗಿದೆ.  ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ದೇಶ ಸಶಕ್ತೀಕರಣ ಆಗುತ್ತಿದೆ. ಮೋದಿ ಬಂದ ಮೇಲೆ ಸಬ್ ಕಾ ಸಾಥ್ ಸಬ್ ಕ ವಿಕಾಸ್​ ಶುರುವಾಗಿದೆ. ದೇಶ ಅತ್ಯಂತ ವೇಗವಾಗಿ ಪ್ರಗತಿ ಸಾಧಿಸುತ್ತಿದೆ. ದಲಿತ, ಹಿಂದುಳಿದ ವರ್ಗಗಳ ಪ್ರಗತಿಗೆ ಮೋದಿ ಸರ್ಕಾರ ಪಣತೊಟ್ಟಿದೆ ಎಂದು  ನುಡಿದರು.

ಕಾಡಂಚಿನ ಸಮುದಾಯ ನಿವಾಸಿಗಳ ಜತೆ ಸಂವಾದ ನಡೆಸಿ ಮಾತನಾಡಿದ ಜೆಪಿ ನಡ್ಡಾ, ಆದಿವಾಸಿ ಸಮುದಾಯದ ದ್ರೌಪದಿ ಮುರ್ಮು ರಾಷ್ಟ್ರಪತಿ ಮಾಡಿದ್ದೇವೆ. ಈ ಪ್ರದೇಶದ ಚಿತ್ರಣವನ್ನೇ ಬದಲಿಸುವ ಸಂಕಲ್ಪ ಮಾಡಲು ಬಂದಿದ್ದೇನೆ ಎಂದರು.

ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಗೃಹಸಚಿವ ಆರಗ ಜ್ಞಾನೇಂದ್ರ, ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Key words: chamaraj nagar- JP Nadda – confident – Vijaya Sankalpa Yatra -BJP