Friday, October 2, 2026

BDA Apartments

You should utilize any platform that you get to learn: Nagathihalli Chandrashekar BDA JK_Adv BDA Adv
Home Front Page  ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಾರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ.

 ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಾರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ.

ಚಾಮರಾಜನಗರ,ಜುಲೈ,6,2021(www.justkannada.in): ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಬಿವೈ ವಿಜಯೇಂದ್ರ ವಿರುದ್ಧ ಪದೇ ಪದೇ ಹೇಳಿಕೆ ನೀಡುತ್ತಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಆಕ್ರೋಶ ಭುಗಿಲೆದ್ಧಿದೆ.

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಾರಿಗೆ ಸಿಎಂ ಬಿಎಸ್ ಯಡಿಯೂರಪ್ಪ, ವಿಜೇಯೇಂದ್ರ ಅಭಿಮಾನಿಗಳು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಹರಳುಕೋಟೆ ಬಳಿ ವೀರಶೈವ ಲಿಂಗಾಯತ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು ವೀರಶೈವ ಲಿಂಗಾಯತ ವಿರೋಧಿ ಯತ್ನಾಳ್ ಗೆ ಧಿಕ್ಕಾರ, ವೀರಶೈವ ಲಿಂಗಾಯತ ರನ್ನು ಒಡೆಯುತ್ತಿರುವ ಯತ್ನಾಳ್ ಗೆ ಧಿಕ್ಕಾರ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನೊಂದೆಡೆ ಚಾಮರಾಜನಗರದ ಸಿದ್ದಮಲ್ಲೇಶ್ವರ ಮಠದ ಬಳಿಯೂ ಶಾಸಕ ಯತ್ನಾಳ್ ಗೆ ಪ್ರತಿಭಟನೆಯ ಬಿಸಿ ತಟ್ಟಿದೆ. ಚಾಮರಾಜನಗರದ ಸಿದ್ದಮಮಲ್ಲೇಶ್ವರ ಮಠಕ್ಕೆ ಯತ್ನಾಳ್ ಭೇಟಿ ಕೊಡ್ತಾರೆ  ಎಂದು ಗೇಟಿನ ಮುಂಭಾಗ ಜಮಾಯಿಸಿದ ಸಿಎಂ ಯಡಿಯೂರಪ್ಪ ಹಾಗೂ ವಿಜಯೇಂದ್ರ ಅಭಿಮಾನಿಗಳು ಪ್ರತಿಭಟನೆಗೆ ಮುಂದಾದರು. ಯಡಿಯೂರಪ್ಪ ವಿರುದ್ಧ ಪದೇ ಪದೇ ಯಾಕೆ ಮಾತಾಡ್ತಿರಾ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಪೊಲೀಸರು ಮಧ್ಯ ಪ್ರವೇಶಿಸಿದ್ದು,  ಪ್ರತಿಭಟನಾನಿರತರನ್ನು ತಡೆಯಲು ಯತ್ನಿಸಿದರು.

 

Key words: chamarajanagar-MLA-Basanagouda patil yatnal-protests -against