ಚಾಮರಾಜನಗರ ಆಕ್ಸಿಜನ್ ದುರಂತ: ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ ಪರಿಹಾರ ಬಿಡುಗಡೆ…

ಬೆಂಗಳೂರು,ಮೇ,22,2021(www.justkannada.in):  ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್  ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಪಟ್ಟ 24 ಮಂದಿಯ ಕುಟುಂಬಗಳಿಗೆ ರಾಜ್ಯ ಸರ್ಕಾರ ಪರಿಹಾರ ಬಿಡುಗಡೆ ಮಾಡಿದೆ ಎಂಬ ಮಾಹಿತಿ ಲಭ್ಯವಾಗಿದೆ.jk

ಪ್ರಕರಣಕ್ಕೆ ಸಂಬಂಧಿಸಿಂತೆ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರ ತಲಾ 2 ಲಕ್ಷ ಪರಿಹಾರವನ್ನ ಬಿಡುಗಡೆ ಮಾಡಿದೆ. ಪರಿಹಾರಕ್ಕಾಗಿ ರಾಜ್ಯ ಸರ್ಕಾರ 48 ಲಕ್ಷ ರೂಪಾಯಿ ಹಣವನ್ನು ಜಿಲ್ಲಾಧಿಕಾರಿ ಖಾತೆಗೆ ವರ್ಗಾವಣೆ ಮಾಡಿದೆ ಎಂದು ತಿಳಿದುಬಂದಿದೆ.chamarajanagar-oxygen-disaster-release-compensation-deceased-families

ಮೇ 2ರಂದು ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್  ಕೊರತೆಯಿಂದಾಗಿ 24 ಕೋವಿಡ್ ರೋಗಿಗಳು ಸಾವನ್ನಪ್ಪಿದ್ದರು.  ಈ ಕುರಿತು ತನಿಖೆ ನಡೆಸಿದ್ಧ ತಜ್ಞರ ಸಮಿತಿ ಘಟನೆಗೆ ಚಾಮರಾಜನಗರ ಡಿಸಿಯೇ ನೇರ  ಹೊಣೆ ಎಂದು ಹೈಕೋರ್ಟ್ ಗೆ ವರದಿ ಸಲ್ಲಿಸಿತ್ತು. ಈ ಮಧ್ಯೆ ಮೃತರ ಕುಟುಂಬಗಳಿಗೆ ಸದ್ಯಕ್ಕೆ 2 ಲಕ್ಷ ರೂ ಪರಿಹಾರ ನೀಡುವುದಾಗಿ ಸರ್ಕಾರ ಹೈಕೋರ್ಟ್ ಗೆ ತಿಳಿಸಿತ್ತು. ಈ ವೇಳೆ ಹೈಕೋರ್ಟ್ ಕೂಡಲೇ ಪರಿಹಾರ ಬಿಡುಗಡೆ ಮಾಡುವಂತೆ ಕಳೆದ ಎರಡು ದಿನಗಳ ಹಿಂದೆ ಸರ್ಕಾರಕ್ಎಕ ಸೂಚನೆ ನೀಡಿತ್ತು.

 

Key words: Chamarajanagar -Oxygen- Disaster-Release – compensation – deceased- families