ಚಾಮರಾಜನಗರ ಆಕ್ಸಿಜನ್ ಘಟನೆ: ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಿ, ನ್ಯಾಯಾಲಯದ ಗಮನಕ್ಕೆ ತನ್ನಿ….

ಬೆಂಗಳೂರು,ಮೇ,13,2021(www.justkannada.in): ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಿತಿ ನೀಡಿರುವ ವರದಿ ಆಧಾರದ ಮೇಲೆ ಸಂಬಂಧಿಸಿದವರ ವಿರುದ್ಧ ಕ್ರಮ ಕೈಗೊಂಡು ನ್ಯಾಯಾಲಯಕ್ಕೆ ತಿಳಿಸುವಂತೆ ಕೋರ್ಟ್ ಆದೇಶಿಸಿದೆ.jk

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ, ಸಮಿತಿ ತನ್ನ ವರದಿಯಲ್ಲಿ ಉಲ್ಲೇಖಿಸಿರುವಂತೆ ಆಗಿರುವ ನ್ಯೂನತೆಗಳಿಗೆ ಸಂಬಂಧಿಸಿದವರ ವಿರುದ್ಧ ಕ್ರಮಗಳನ್ನು ಕೈಗೊಂಡು, ಆ ಬಗ್ಗೆ ನ್ಯಾಯಾಲಯಕ್ಕೆ ತಿಳಿಸಬೇಕು. ಅಲ್ಲಿಯವರೆಗೆ ಜಪ್ತಿ ಮಾಡಿರುವ ದಾಖಲೆಗಳು ಸರಕಾರದ ಮುಖ್ಯ ಕಾರ್ಯದರ್ಶಿಯ ಬಳಿಯೇ ಇರಲಿ ಎಂದು ಆದೇಶಿಸಿತು.

ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ…

ಹೈಕೋರ್ಟ್, ಘಟನೆಯ ಬಗ್ಗೆ ಕಾನೂನು ಸೇವಾ ಪ್ರಾಧಿಕಾರದ ಸಮಿತಿ ನೀಡಿರುವ ಶಿಫಾರಸ್ಸಿನಂತೆ ಮೃತರ ಕುಟುಂಬಗಳಿಗೆ ಪರಿಹಾರ ನೀಡುವ ಕುರಿತು ಸರಕಾರಕ್ಕೆ ತನ್ನ ನಿಲುವು ತಿಳಿಸುವಂತೆ ಸೂಚಿಸಿದೆ. ಸಿಜೆ ಎ.ಎಸ್. ಓಕ್ ನೇತೃತ್ವದ ನ್ಯಾಯಪೀಠ, ಸುಪ್ರೀಂಕೋರ್ಟ್ ನ ಹಲವು ತೀರ್ಪುಗಳನ್ನು ಉಲ್ಲೇಖಿಸಿ ರಾಜ್ಯ ಸರಕಾರ ಪರಿಹಾರವನ್ನು ನೀಡಬೇಕಾಗಿದ್ದು ಸರಕಾರದ ಕರ್ತವ್ಯ. ಆ ಬಗ್ಗೆ ಮುಂದಿನ ವಿಚಾರಣೆ ವೇಳೆ ನಿಲುವು ತಿಳಿಸಬೇಕು ಎಂದು ಹೇಳಿತು.Chamarajanagar –Oxygen- Incidence- Take –action-high court-order

ಸಂವಿಧಾನದ 21ನೇ ವಿಧಿ ಅನ್ವಯ ಮೂಲಭೂತ ಹಕ್ಕುಗಳ ಉಲ್ಲಂಘನೆಯಿಂದಾಗಿ ನಾಗರಿಕರು ಸಾವನ್ನಪ್ಪಿದ ಸಂದರ್ಭದಲ್ಲಿ ಪರಿಹಾರ ನೀಡುವಂತೆ ಆದೇಶಿಸುವ ಹಕ್ಕು ಸರಕಾರಕ್ಕೆ ಇದೆ ಎಂದು ನ್ಯಾಯಪೀಠ ಹೇಳಿತು.

Key words: Chamarajanagar –Oxygen- Incidence- Take –action-high court-order