ಬಾನು ಮುಷ್ತಾಕ್ ರಿಂದ ದಸರಾ ಉದ್ಘಾಟನೆಗೆ ವಿರೋಧ: ಸೆ.9 ರಂದು ಚಾಮುಂಡಿ ಬೆಟ್ಟ ಚಲೋ

ಮೈಸೂರು,ಸೆಪ್ಟಂಬರ್, 6,2025 (www.justkannada.in):  ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರ ಆಯ್ಕೆಗೆ ವಿರೋಧ ವ್ಯಕ್ತಪಡಿಸಿ ಸೆಪ್ಟಂಬರ್ 9 ರಂದು ಚಾಮುಂಡಿ ಬೆಟ್ಟ ಚಲೋ ಹಮ್ಮಿಕೊಳ್ಳಲಾಗಿದೆ.

ಹಿಂದೂ ಜಾಗರಣಾ ವೇದಿಕೆಯಿಂದ ಸೆಪ್ಟಂಬರ್ 9 ರಂದು ನಗರದ ಕುರುಬರಹಳ್ಳಿ ವೃತ್ತದಿಂದ ಚಾಮುಂಡಿ ಬೆಟ್ಟದವರೆಗೆ ಚಾಮುಂಡಿ ಬೆಟ್ಟ ಚಲೋ ಆಯೋಜಿಸಲಾಗಿದೆ.  ನಮ್ಮ ನಡಿಗೆ ತಾಯಿ ಚಾಮುಂಡೇಶ್ವರಿ ಸನ್ನಿಧಿಗೆ ಎಂದು ಯಾತ್ರೆ ನಡೆಸಲು ಮುಂದಾಗಿದ್ದಾರೆ.

ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಆಯ್ಕೆ ಮಾಡಿರುವುದಕ್ಕೆ ಬಿಜೆಪಿ ನಾಯಕರು ಸೇರಿ ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ. ಇನ್ನು ಕಳೆದ ಎರಡು ದಿನಗಳ ಹಿಂದೆ  ಜಿಲ್ಲಾಡಳಿತ ವತಿಯಿಂದ ದಸರಾ ಉದ್ಘಾಟನೆಗೆ ಆಗಮಿಸುವಂತೆ ಸಾಹಿತಿ ಬಾನು ಮುಷ್ತಾಕ್ ಅವರಿಗೆ ಅಧಿಕೃತ ಆಹ್ವಾನ ನೀಡಲಾಗಿದೆ.

Key words: Banu Mushtaq,Dasara inauguration, Chamundi Hill Chalo