Wednesday, September 2, 2026

BDA Apartments

Home Front Page ಚಾಮುಂಡಿ ಬೆಟ್ಟಕ್ಕೆ ಭೇಟಿ: ನಾಡದೇವಿಗೆ ಸೀರೆ ಹರಕೆ ತೀರಿಸಿ ಪೂಜೆ ಸಲ್ಲಿಸಿದ ಸಿಎಂ ಡಿಕೆಶಿ ಪತ್ನಿ

ಚಾಮುಂಡಿ ಬೆಟ್ಟಕ್ಕೆ ಭೇಟಿ: ನಾಡದೇವಿಗೆ ಸೀರೆ ಹರಕೆ ತೀರಿಸಿ ಪೂಜೆ ಸಲ್ಲಿಸಿದ ಸಿಎಂ ಡಿಕೆಶಿ ಪತ್ನಿ

ಮೈಸೂರು,ಜುಲೈ,17,2026 (www.justkannada.in):  ಇಂದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮೊದಲ ಆಷಾಢ ಶುಕ್ರವಾರದ ಸಂಭ್ರಮವಾಗಿದ್ದು ಸಿಎಂ ಡಿಕೆ ಶಿವಕುಮಾರ್ ಪತ್ನಿ ಉಷಾ ಅವರು ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ್ದಾರೆ.

ಇಂದು ಮೊದಲ ಆಷಾಢ ಶುಕ್ರವಾರದಂದು ಮೈಸೂರಿನ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ  ಸಿಎಂ ಡಿಕೆ ಶಿವಕುಮಾರ್ ಪತ್ನಿ ಉಷಾ ಅವರು ತಾಯಿ ಚಾಮುಂಡೇಶ್ವರಿಗೆ ಸೀರೆ ಹರಕೆ ತೀರಿಸಿ ಪೂಜೆ ಸಲ್ಲಿಕೆ ಮಾಡಿದ್ದಾರೆ.

ಡಿಕೆ ಶಿವಕುಮಾರ್ ಅವರು ಸಿಎಂ ಆದರೆ ಆಷಾಢ ಶುಕ್ರವಾರ ಸೀರೆ ಉಡಿಸುವುದಾಗಿ ಉಷಾ ಅವರು ಹರಕೆ ಹೊತ್ತಿದ್ದು ಬೇಡಿಕೆ ಈಡೇರಿದ ಹಿನ್ನೆಲೆಯಲ್ಲಿ ಇಂದು ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ಹರಕೆ ತೀರಿಸಿದ್ದಾರೆ.

Key words: CM, DK Shivakumar, wife, Ashada, Mysore, Chamundi hills