Friday, August 21, 2026

BDA Apartments

Home Front Page ವೈಯಕ್ತಿಕ ದ್ವೇಷದಿಂದ ಚಂದ್ರಶೇಖರ್ ಗುರೂಜಿ ಹತ್ಯೆ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ- ಸಿಎಂ ಬೊಮ್ಮಾಯಿ.

ವೈಯಕ್ತಿಕ ದ್ವೇಷದಿಂದ ಚಂದ್ರಶೇಖರ್ ಗುರೂಜಿ ಹತ್ಯೆ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ- ಸಿಎಂ ಬೊಮ್ಮಾಯಿ.

ಬೆಂಗಳೂರು,ಜುಲೈ,6,2022(www.justkannada.in): ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ. ವೈಯಕ್ತಿಕ ದ್ವೇಷದಿಂದ ಚಂದ್ರ ಶೇಖರ್ ಗುರೂಜಿ ಅವರ ಹತ್ಯೆ ನಡೆದಿದೆ. ಇಂತಹ ವಾತಾವರಣ ದಮನ ಮಾಡುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮಾಧ್ಯಮಗಳ ಜತೆ ಇಂದು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಚಂದ್ರಶೇಖರ್ ಗುರೂಜಿ ಹತ್ಯೆಯಲ್ಲಿ ಕಾನೂನು ಸುವ್ಯವಸ್ಥೆ ಲೋಪವಲ್ಲ, ವೈಯಕ್ತಿಕ ದ್ವೇಷದಿಂದ ಕೊಲೆಯಾಗಿದೆ. ಇಂದಿನ ಯುವಕರ ಮನಸ್ಥಿತಿಯಿಂದಾಗಿ ಈ ರೀತಿ ಹತ್ಯೆಗಳು ನಡೆಯುತ್ತಿವೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಿಲ್ಲ ಎಂಬ ಕಾಂಗ್ರೆಸ್ ನಾಯಕರ ಆರೋಪ ಸುಳ್ಳು ಎಂದು ತಿರುಗೇಟು ನೀಡಿದರು.

ಇನ್ನು ರಾಜ್ಯದಲ್ಲಿ ಮಳೆಯಿಂದಾಗಿ ಹಲವು ಪ್ರದೇಶಗಳಲ್ಲಿ ಹಾನಿಯಾಗಿದೆ. ತುರ್ತು ಗಮನ ಹರಿಸಲು ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿದ್ದೇನೆ. ಜಿಲ್ಲಾಧಿಕಾರಿಗಳ ಜತೆ ಸಭೆಯನ್ನು ನಡೆಸಲಿದ್ದೇನೆ  ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

Key words: Chandrasekhar Guruji –murder- personal enmity-CM Bommai.