ಇಂದು ಚಂದ್ರನ ಅಂಗಳಕ್ಕೆ ಚಂದ್ರಯಾನ-3: ಟ್ವೀಟ್ ಮಾಡಿ ಶುಭಕೋರಿದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ.

ಬೆಂಗಳೂರು,ಆ,23,2023(www.justkannada.in):  ಇಂದು ಚಂದ್ರನ ಅಂಗಳಕ್ಕೆ ಚಂದ್ರಯಾನ 3 ವಿಕ್ರಮ್ ಲ್ಯಾಂಡರ್ ಇಳಿಯಲಿದ್ದು ಇದರ ಯಶಸ್ವಿಗಾಗಿ ದೇಶಾದ್ಯಂತ ಪೂಜೆ ಪ್ರಾರ್ಥನೆಗಳು ನಡೆಯುತ್ತಿವೆ. ಈ ಮಧ್ಯೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಟ್ವೀಟ್ ಮಾಡಿ ಶುಭ ಕೋರಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಹೆಚ್.ಡಿ ದೇವೇಗೌಡರು, ಇಸ್ರೋ ವಿಶ್ವ ದರ್ಜೆಯ ವೈಜ್ಞಾನಿಕ ಸಂಸ್ಥೆಯಾಗಿದ್ದು, ದಶಕಗಳಿಂದ ನಮಗೆಲ್ಲರಿಗೂ ಹೆಮ್ಮೆ ತಂದಿದೆ. ಅವರ ಅಮೋಘ ಸಾಧನೆಗಳು ನಮ್ಮನ್ನು ವಿಶ್ವದ ಅಗ್ರಸ್ಥಾನದಲ್ಲಿರಿಸಿದೆ. ದೇವರು ನಮ್ಮ ರಾಷ್ಟ್ರ ಮತ್ತು ನಮ್ಮ ವಿಜ್ಞಾನಿಗಳನ್ನು ಆಶೀರ್ವದಿಸಲಿ. ಚಂದ್ರಯಾನ 3 ಯಶಸ್ವಿಯಾಗಲಿ ಎಂದು ಶುಭ ಹಾರೈಸಿದ್ದಾರೆ.

Key words: Chandrayaan-3 – Former PM-HD Deve Gowda – best wishes.