ಚಂದ್ರಯಾನ-3: ನೌಕೆ 5ನೇ ಕಕ್ಷೆ ಎತ್ತರಿಸುವ ಪ್ರಕ್ರಿಯೆ ಯಶಸ್ವಿ

ಬೆಂಗಳೂರು, ಜುಲೈ 26, 2023 (www.justkannada.in): ಚಂದ್ರಯಾನ-3 ನೌಕೆ 5ನೇ ಕಕ್ಷೆ ಎತ್ತರಿಸುವ ಪ್ರಕ್ರಿಯೆಯನ್ನು ಮಂಗಳವಾರ ಯಶಸ್ವಿಯಾಗಿ ನಡೆಸಲಾಗಿದೆ.

ಈ ಕುರಿತು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಾದ ಇಸ್ರೋ ಮಾಹಿತಿ ನೀಡಿದೆ.

ಜುಲೈ 14ರಂದು ಶ್ರೀಹರಿಕೋಟಾದ ಉಡ್ಡಯನ ನಲೆಯಿಂದ ಹಾರಿಬಿಡಲಾಗಿದ್ದ ಚಂದ್ರಯಾನ-3 ನೌಕೆ 5ನೇ ಕಕ್ಷೆ ಎತ್ತರಿಸುವ ಪ್ರಕ್ರಿಯೆಯನ್ನು ನಿನ್ನೆ ಯಶಸ್ವಿಯಾಗಿ ನಡೆಸಲಾಯಿತು. ಚಂದ್ರಯಾನ-3 ನೌಕೆಯು 127609 ಕಿಲೋಮೀಟರ್ X236 ಕಿ.ಮೀ ಕಕ್ಷೆಯನ್ನು ಸೇರಿಕೊಳ್ಳಲಿದೆ ಎಂದು ಇಸ್ರೋ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಆಗಸ್ಟ್ 1ರಂದು ಮಧ್ಯರಾತ್ರಿ 12 ಗಂಟೆಯಿಂದ 1 ಗಂಟೆಯ ಅವಧಿಯಲ್ಲಿ ಟ್ರಾನ್ಸ್ ಲೂನಾರ್ ಇಂಜೆಕ್ಷನ್ ಪ್ರಕ್ರಿಯೆ ನಡೆಸಲಾಗುವುದು. ಈ ಪ್ರಕ್ರಿಯೆ ಬಳಿಕ ನೌಕೆಯು ಭೂಮಿ ಸುತ್ತುವರೆಯುವುದನ್ನು ಬಿಟ್ಟು, ಚಂದ್ರನ ಕಡೆಗೆ ಪ್ರಯಾಣ ಬೆಳೆಸಲಿದೆ.