Thursday, October 15, 2026

Dasara Wishes

Strengthening DasraWishes_JK DasraWishes JK
Happy Dasara
Home Front Page ಒಂದಂತೂ ಸತ್ಯ ರಾಜ್ಯ ರಾಜಕಾರಣದಲ್ಲಿ ಬದಲಾವಣೆ ಆಗಲಿದೆ- ಬಿವೈ ವಿಜಯೇಂದ್ರ

ಒಂದಂತೂ ಸತ್ಯ ರಾಜ್ಯ ರಾಜಕಾರಣದಲ್ಲಿ ಬದಲಾವಣೆ ಆಗಲಿದೆ- ಬಿವೈ ವಿಜಯೇಂದ್ರ

ಬೆಳಗಾವಿ, ಅಕ್ಟೋಬರ್,10,2024 (www.justkannada.in): ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಬೆಳವಣಿಗೆ ನಡೆಯುತ್ತಿದ್ದು ಒಂದಂತೂ ಸತ್ಯ ರಾಜ್ಯ ರಾಜಕಾರಣದಲ್ಲಿ ಬದಲಾವಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ, ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಬೆಳವಣಿಗೆ ನಡೆಯುತ್ತಿವೆ. ರಾಜಕೀಯ ಬೆಳವಣಿಗೆಗಳನ್ನ ರಾಜ್ಯದ ಜನರು ನೋಡಲಿದ್ದಾರೆ ಒಂದಂತೂ ಸತ್ಯ ರಾಜ್ಯ ರಾಜಕಾರಣದಲ್ಲಿ ಬದಲಾವಣೆಯಾಗಲಿದೆ ಎಂದರು.

ರಮೇಶ್ ಜಾರಕಿಹೊಳಿ ಪಕ್ಷದಲ್ಲಿ ತಮ್ಮ ನಾಯಕತ್ವ ಒಪ್ಪದ ವಿಚಾರ ಕುರಿತು ಪ್ರತಿಕ್ರಿಯಿಸಿದ ಬಿವೈ ವಿಜಯೇಂದ್ರ,  ಎಲ್ಲ ಹಿರಿಯರು ಪಕ್ಷದ ವರಿಷ್ಠರು ಒಳ್ಳೆಯ ಅವಕಾಶ ನೀಡಿದ್ದಾರೆ. ಹಿರಿಯರಿಗೆ ನನ್ನನ್ನು ಅರ್ಥ ಮಾಡಿಕೊಳ್ಳಲು  ಸ್ವಲ್ಪ ಸಮಯ ಬೇಕಾಗುತ್ತೆ ಅದನ್ನ ಪಕ್ಷ ವಿರೋಧಿ ಚಟುವಟಿಕೆ ಅಂತಾ ಭಾವಿಸಿದ್ರೆ ತಪ್ಪಾಗುತ್ತೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಮುನ್ನಡೆಸುವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Key words: change, state, politics, BY Vijayendra