ಚನ್ನಬಸವ ಮಹಾಸ್ವಾಮಿಗಳು ಲಿಂಗೈಕ್ಯ: ಸಿಎಂ ಸಿದ್ದರಾಮಯ್ಯ ಸಂತಾಪ

ಬೆಳಗಾವಿ,ಡಿಸೆಂಬರ್,11,2025 (www.justkannada.in): ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಇಂಗಳೇಶ್ವರ ವಿರಕ್ತ ಮಠದ ಚನ್ನಬಸವ ಮಹಾಸ್ವಾಮಿಗಳು ಲಿಂಗೈಕ್ಯರಾಗಿದ್ದು ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಇಂಗಳೇಶ್ವರ ವಿರಕ್ತ ಮಠದ ಚನ್ನಬಸವ ಮಹಾಸ್ವಾಮಿಗಳು ಲಿಂಗೈಕ್ಯರಾದ ಸುದ್ದಿ ತಿಳಿದು ದುಃಖವಾಯಿತು.

ಇಂಗಳೇಶ್ವರದ ವಚನ ಶಿಲಾಶಾಸನ ಮಂಟಪದಲ್ಲಿ ಕಲ್ಲುಗಳ ಮೇಲೆ ವಚನಗಳನ್ನು ಕೆತ್ತಿಸಿ, ಶರಣರ ಪರಂಪರೆ ಹಾಗೂ ವಿಚಾರಧಾರೆಯನ್ನು ಸಮಾಜಕ್ಕೆ ಸಾರುವ ಕಾರ್ಯವನ್ನು ನಿಸ್ವಾರ್ಥದಿಂದ ಮಾಡುತ್ತಾ ಬಂದವರು. ಧರ್ಮಕಾರ್ಯದ ಜೊತೆ ಸಾಮಾಜಿಕ ಸೇವೆಯನ್ನೂ ಸಲ್ಲಿಸುತ್ತಿದ್ದ ಶ್ರೀಗಳ ಅಗಲಿಕೆ ಸಮಾಜಕ್ಕೆ ತುಂಬಲಾರದ ನಷ್ಟ. ಶ್ರೀಗಳ ಆತ್ಮಕ್ಕೆ ಚಿರಶಾಂತಿ ದೊರಕಲಿ, ಮಠದ ಭಕ್ತಾದಿಗಳಿಗೆ ನೋವು ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

Key words: Channabasava Mahaswamy, Lingayakya, Condolences, CM Siddaramaiah