Saturday, September 12, 2026

BDA Apartments

Home Front Page ಚನ್ನಪಟ್ಟಣ ಬೈ ಎಲೆಕ್ಷನ್: ‘ಕೈ’ ಅಭ್ಯರ್ಥಿ ನಾನೇ ಎಂದ ಡಿಸಿಎಂ ಡಿಕೆ ಶಿವಕುಮಾರ್

ಚನ್ನಪಟ್ಟಣ ಬೈ ಎಲೆಕ್ಷನ್: ‘ಕೈ’ ಅಭ್ಯರ್ಥಿ ನಾನೇ ಎಂದ ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು, ಆಗಸ್ಟ್ 30,2024 (www.just‌kannada.in):  ಚನ್ನಪಟ್ಟಣಕ್ಕಾಗಿ ವಿಧಾನಸಭಾ ಉಪ ಚುನಾವಣೆಗೆ ನಾನೇ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಘೋಷಿಸಿದ್ದಾರೆ.

ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್,  ಚನ್ನಪಟ್ಟಣದ ಅಭ್ಯರ್ಥಿ ನಾನೇ. ಕಾಂಗ್ರೆಸ್ ಪಕ್ಷದಿಂದ ಯಾರೇ ಅಭ್ಯರ್ಥಿ ಆದರೂ ನನಗೆ ಮತ ಹಾಕಿದಂತೆ. ಬಿ ಫಾರ್ಮ್ ಕೊಡೋನು ನಾನೇ, ಅದರ ಮೇಲೆ ಸಹಿ ಮಾಡೋನು ನಾನೇ ಮತ್ತು ಸ್ಪರ್ಧೆಗಿಳಿಯುವವನು ಸಹ ನಾನೇ, ಇದನ್ನು ಆನ್ ರೆಕಾರ್ಡ್ ಹೇಳುತ್ತಿದ್ದೇನೆ ಎಂದರು.

ಚನ್ನಪಟ್ಟಣದಲ್ಲಿ ಉದ್ಯೋಗಮೇಳ  ಕುರಿತು ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ಸೇವೆ ಮಾಡಲು ನಮಗೆ ಅಧಿಕಾರ, ಅವಕಾಶ ನೀಡಿದ್ದಾರೆ. ನಾವು ನಮ್ಮ ಅಧಿಕಾರ ಬಳಸಿಕೊಂಡು ಜನರಿಗಾಗಿ ಯಾವ ರೀತಿ ಒಳ್ಳೆಯದು ಮಾಡಬೇಕು ಎಂಬುದು ನಮ್ಮ ಸರ್ಕಾರದ ಚಿಂತನೆ ಎಂದರು.

ಚನ್ನಪಟ್ಟಣ ಉಪ ಚುನಾವಣೆ ಸಂಬಂಧ ಎರಡು ವಿಪಕ್ಷಗಳು ಒಂದಾಗಿವೆ. ಒಂದು, ಎರಡು, ಮೂರಾದರೂ ಆಗಲಿ ನಮಗೆ ಅದು ಸಂಬಂಧವಿಲ್ಲ. ನಾವು ಜನಸೇವೆ ಮಾಡುತ್ತೇವೆ, ಅದರ ಮೇಲೆ ಉಳಿದುದ್ದನ್ನ ಜನರ ತೀರ್ಮಾನಕ್ಕೆ ಬಿಟ್ಟಿದ್ದೇವೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.

Key words: Channapatna, by-election, DCM DK Shivakumar, candidate