Wednesday, October 7, 2026

BDA Apartments

immense respect BDA JK_Adv BDA Adv
Home Front Page ಚನ್ನಪಟ್ಟಣ ಉಪಚುನಾವಣೆ: ಎನ್ ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ

ಚನ್ನಪಟ್ಟಣ ಉಪಚುನಾವಣೆ: ಎನ್ ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ

ಚನ್ನಪಟ್ಟಣ, ಅಕ್ಟೋಬರ್,25,2024 (www.justkannda.in): ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಇಂದು ನಾಮಪತ್ರ ಸಲ್ಲಿಕೆ ಮಾಡಿದರು.

ಇಂದು ಚನ್ನಪಟ್ಟಣ ತಾಲ್ಲೂಕು ಕಚೇರಿಗೆ ಆಗಮಿಸಿ ನಿಖಿಲ್ ಕುಮಾರಸ್ವಾಮಿ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದರು. ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ವಿಪಕ್ಷನಾಯಕ ಆರ್.ಅಶೋಕ್, ಮಾಜಿ ಕೇಂದ್ರ ಸಚಿವ ಡಿ.ವಿ ಸದಾನಂದಗೌಡ, ಸಂಸದ ಯದುವೀರ್ ಸಾಥ್ ನೀಡಿದರು.

ನಾಮಪತ್ರ ಸಲ್ಲಿಕೆಗೂ ಮುನ್ನ ನಿಖಿಲ್ ಕುಮಾರಸ್ವಾಮಿ ಪರ ಮೈತ್ರಿನಾಯಕರು ಬೃಹತ್ ರೋಡ್ ಶೋ ನಡೆಸಿ ಶಕ್ತಿಪ್ರದರ್ಶಿಸಿದರು. ಸಾವಿರಾರು ಜನ ಕಾರ್ಯಕರ್ತರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಇಂದು ನಾಮಪತ್ರ ಸಲ್ಲಿಕೆಗೆ ಕಡೇ ದಿನವಾಗಿದ್ದು, ಈಗಾಗಲೇ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿಪಿ ಯೋಗೇಶ್ವರ್ ನಾಮಪತ್ರ ಸಲ್ಲಿಸಿದ್ದಾರೆ.  ನವೆಂಬರ್ 13 ರಂದು ಚುನಾವಣೆ ನಡೆದು ನವೆಂಬರ್ 23ಕ್ಕೆ ಫಲಿತಾಂಶ ಪ್ರಕಟವಾಗಲಿದೆ.

Key words: Channapatna, by-election, Nikhil Kumaraswamy , nomination