Sunday, August 9, 2026

BDA Apartments

Home Front Page ಇಂದು ಚನ್ನಪಟ್ಟಣ ಮೈತ್ರಿ ಅಭ್ಯರ್ಥಿ ಫೈನಲ್: ನಾನು ಟಿಕೆಟ್ ಆಕಾಂಕ್ಷಿ ಅಲ್ಲ- ನಿಖಿಲ್ ಕುಮಾರಸ್ವಾಮಿ

ಇಂದು ಚನ್ನಪಟ್ಟಣ ಮೈತ್ರಿ ಅಭ್ಯರ್ಥಿ ಫೈನಲ್: ನಾನು ಟಿಕೆಟ್ ಆಕಾಂಕ್ಷಿ ಅಲ್ಲ- ನಿಖಿಲ್ ಕುಮಾರಸ್ವಾಮಿ

ಬೆಂಗಳೂರು,ಅಕ್ಟೋಬರ್,23,2024 (www.justkannada.in):  ಚನ್ನಪಟ್ಟಣ ಉಪಚುನಾವಣೆಗೆ ಇಂದು  ಮೈತ್ರಿ ಅಭ್ಯರ್ಥಿಯ ಹೆಸರು ಫೈನಲ್ ಮಾಡಲಾಗುತ್ತದೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.

ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಬೆನ್ನಲ್ಲೆ ನಿಖಿಲ್ ಕುಮಾರಸ್ವಾಮಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಬುಲಾವ್ ನೀಡಿದ್ದರು. ಈ ಹಿನ್ನೆಲೆಯಲ್ಲಿ ಹೆಚ್ ಡಿ ದೇವೇಗೌಡರನ್ನ ಭೇಟಿಯಾಗಿ ಆಶೀರ್ವಾದ ಪಡೆದ ಬಳಿಕ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ನಾನು  ಟಿಕೆಟ್ ಆಕಾಂಕ್ಷಿ ಎಂದು ಎಲ್ಲೂ ಹೇಳಿಲ್ಲ.  ಕಾರ್ಯಕರ್ತರಿಗೆ ಟಿಕೆಟ್ ನೀಡಿದರೇ ಸೂಕ್ತ.  ಕಾರ್ಯಕರ್ತರಿಗೆ ಟಿಕೆಟ್ ನೀಡಲು ತಿಳಿಸಿದ್ದೇನೆ. ಎಂದಿಗೂ ನಾನು ಚನ್ನಪಟ್ಟಣದ ಟಿಕೆಟ್ ಆಕಾಂಕ್ಷಿ ಅಲ್ಲ. ಇದು ನನ್ನ ಬೂಟಾಟಿಕೆ ಮಾತಲ್ಲ ಎಂದರು.

ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ವಿಚಾರ ಕುರಿತು ಪ್ರತಿಕ್ರಿಯಿಸಿದ ನಿಖಿಲ್ ಕುಮಾರಸ್ವಾಮಿ, ಅಧಿಕಾರ ಇರುವ ಕಡೆ ತೂರಿದ್ದಾರೆ. ಸಿಪಿ ಯೋಗೇಶ್ವರ್ ಗೆ ಒಂದು ಪಕ್ಷದ ಮೇಲೆ ಬದ್ದತೆ ಇಲ್ಲ ಎಂದು ಕಿಡಿಕಾರಿದರು.

Key words: Channapatna, candidate final, today, Nikhil Kumaraswamy