ಚನ್ನಪಟ್ಟಣ ಬಿಟ್ಟು ಬೇರೆ ಕ್ಷೇತ್ರದಲ್ಲಿ ಅರ್ಜಿ ಹಾಕಲ್ಲ: ಇದೇ ನನ್ನ ಕೊನೆ ಚುನಾವಣೆ- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಮಿ.

ರಾಮನಗರ,ಫೆಬ್ರವರಿ,27,2023(www.justkannada.in): ಈ ಬಾರಿಯ ವಿಧಾನಸಭಾ ಚುನಾವಣೆಗೆ ಚನ್ನಪಟ್ಟಣ ಬಿಟ್ಟು ಬೇರೆ ಕ್ಷೇತ್ರದಲ್ಲಿ ಅರ್ಜಿ ಹಾಕಲ್ಲ.  ಇದೇ ನನ್ನ ಕೊನೆಯ ಚುನಾವಣೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿದರು.

ಚನ್ನಪಟ್ಟಣದಲ್ಲಿ ಇಂದು ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ಚನ್ನಪಟ್ಟಣ ಬಿಟ್ಟು ಬೇರೆ ಕ್ಷೇತ್ರದಲ್ಲಿ ಅರ್ಜಿ ಹಾಕಲ್ಲ. ಸೂಕ್ತ ಅಭ್ಯರ್ಥಿ ಸಿಕ್ಕಿದ್ದರೆ ನಾನು ನಿಲ್ಲುತ್ತಿರಲಿಲ್ಲ. ಇದೇ ನನ್ನ ಕೊನೆಯ ಚುನಾವಣೆ. 2028ರ ಚುನಾವಣೆಗೆ ಸೂಕ್ತ ಅಭ್ಯರ್ಥಿ ಸಿದ್ಧಪಡಿಸಬೇಕು ಎಂದರು.

ನಾನು ಸಿಎಂ ಆಗಿದ್ದಾಗ ಅಧಿಕಾರ ದುರುಪಯೋಗ ಪಡಿಸಿಕೊಂಡಿಲ್ಲ. ಪ್ರತಿನಿತ್ಯ 16ರಿಂದ 18 ಗಂಟೆಗಳ ಕಾಲ ಪಕ್ಷ ಸಂಘಟನೆ ಮಾಡುತ್ತಿದ್ದೇನೆ. ಸಹಕಾರ ಸಂಘದಲ್ಲಿ ಲೂಟಿ ನಡೆಯುತ್ತಿದೆ. ಚನ್ನಪಟ್ಟಣದಲ್ಲಿ ಅಧಿಕಾರಿಗಳು ಯಾವ ರೀತಿ ನಡೆದುಕೊಳ್ತಿದ್ದಾರೆ ಗೊತ್ತು. ಅಧಿಕಾರ ಇಲ್ಲ ಎಂದು ನಾನು ಕುಗ್ಗಿಲ್ಲ, ಅಧಿಕಾರ ಸಿಕ್ಕಾಗ ದರ್ಪ ತೋರಿಲ್ಲ. ಎಂಎಲ್ ​ಸಿ ಸಿ.ಪಿ.ಯೋಗೇಶ್ವರ್​ ಸ್ವಾಭಿಮಾನಿ ನಡಿಗೆ ಮಾಡುತ್ತಿದ್ದಾರೆ. ಪೊಳ್ಳು ಮಾತಿಗೆ ಚನ್ನಪಟ್ಟಣ ಕ್ಷೇತ್ರದ ಜನರು ಸೊಪ್ಪು ಹಾಕುವುದಿಲ್ಲ ಎಂದು ಹೆಚ್.ಡಿಕೆ ಹೇಳಿದರು.

Key words: Channapatna–my- last election- Former CM- HD Kumaraswamy