ಇಂದಿನಿಂದ ಚಾರ್ಮಾಡಿ ಘಾಟ್’ನಲ್ಲಿ ವಾಹನ ಸಂಚಾರ ಪುನಾರಂಭ

ಚಿಕ್ಕಮಗಳೂರು, ಸೆಪ್ಟೆಂಬರ್ 15, 2019 (www.justkannada.in): ಬಂದ್ ಆಗಿದ್ದ ಚಾರ್ಮಾಡಿ ಘಾಟ್ ನಲ್ಲಿ ಇಂದಿನಿಂದ ವಾಹನ ಸಂಚಾರ ಪುನಾರಂಭವಾಗಿದೆ.

ಚಾರ್ಮಾಡಿ ಘಾಟ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಬಗಾದಿ ಗೌತಮ್ ಆದೇಶ ಹೊರಡಿಸಿದ್ದು, 20 ಕಿ.ಮೀ. ವೇಗದ ಮಿತಿ ದಾಟದಂತೆ ವಾಹನ ಸವಾರರಿಗೆ ಸೂಚನೆ ನೀಡಲಾಗಿದೆ.

ಬೆಳಗ್ಗೆ 6 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಲಘು ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಗುಡ್ಡ ಕುಸಿದು, ಹಲವೆಡೆ ರಸ್ತೆ ಕೊಚ್ಚಿ ಹೋಗಿತ್ತು. ಕಳೆದ ಆಗಸ್ಟ್ 9 ರಿಂದ ಚಾರ್ಮಾಡಿ ಘಾಟ್ ಸಂಚಾರ ಬಂದ್ ಆಗಿತ್ತು.