ಐಪಿಎಲ್ ಅಂಕಪಟ್ಟಿಯಲ್ಲಿ ಕೊನೆಯಿಂದ ಅಗ್ರ ಸ್ಥಾನಕ್ಕೇರಿದ ಚೆನ್ನೈ ಸೂಪರ್ ಕಿಂಗ್ಸ್

ಬೆಂಗಳೂರು, ಏಪ್ರಿಲ್ 22, 2021 (www.justkannada.in): 

ಸತತ ಮೂರನೇ ಗೆಲುವು ದಾಖಲಿಸಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ ಆರ್‌ಸಿಬಿ ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದೆ.

ಮುಂಬೈನಲ್ಲಿ ನಡೆದ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಜಯ ದಾಖಲಿಸಿದ ಧೋನಿ ಪಡೆ ಅಂಕಪಟ್ಟಿಯಲ್ಲಿ ಟಾಪ್ ಸ್ಥಾನಕ್ಕೇರಿದೆ.

4 ಪಂದ್ಯಗಳ ಪೈಕಿ 3 ಪಂದ್ಯ ಗೆದ್ದಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ 6 ಅಂಕ ಸಂಪಾದಿಸಿದೆ.

ಆರ್ ಸಿಬಿ ಕೂಡ ಮೂರು ಪಂದ್ಯ ಗೆದ್ದು 6 ಅಂಕ ಸಂಪಾದಿಸಿದ್ದರೂ, ಚೆನ್ನೈ ರನ್ ರೇಟ್ ನಿಂದಾಗಿ ಅಗ್ರಸ್ಥಾನಕ್ಕೇರಿದೆ.