Sunday, September 13, 2026

BDA Apartments

ಸುಮನಹಳ್ಳಿ ಹಿಂದೂ ರುದ್ರಭೂಮಿಯಲ್ಲಿ ಚಿಮೂ ಅಂತ್ಯಕ್ರಿಯೆ BDA JK_Adv BDA Adv
Home Front Page ಸುಮನಹಳ್ಳಿ ಹಿಂದೂ ರುದ್ರಭೂಮಿಯಲ್ಲಿ ಚಿಮೂ ಅಂತ್ಯಕ್ರಿಯೆ

ಸುಮನಹಳ್ಳಿ ಹಿಂದೂ ರುದ್ರಭೂಮಿಯಲ್ಲಿ ಚಿಮೂ ಅಂತ್ಯಕ್ರಿಯೆ

ಬೆಂಗಳೂರು, ಜನವರಿ 12, 2019 (www.justkannada.in): ಹಿರಿಯ ಸಾಹಿತಿ, ಸಂಶೋಧಕ ಚಿದಾನಂದ ಮೂರ್ತಿ ಶನಿವಾರ ಇಹಲೋಕ ತ್ಯಜಿಸಿದ್ದು, ಇಂದು ಸುಮನಹಳ್ಳಿಯ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಇಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ಅಂತ್ಯಕ್ರಿಯೆ ನಡೆಯಲಿದೆ. ಅಲ್ಲಿಯವರೆಗೂ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ನಡೆಯಲಿದೆ.

ಸುಮನಹಳ್ಳಿಯ ಹಿಂದೂ ರುದ್ರಭೂಮಿಯಲ್ಲಿ ವೀರಶೈವ ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ನಡೆಯಲಿದೆ. ಆದರೆ ಚಿಮೂ ಅವರ ಆಶಯದಂತೆ ಪಾರ್ಥೀವ ಶರೀರಕ್ಕೆ ಯಾವುದೇ ಪೂಜೆ ಮಾಡಲಾಗುವುದಿಲ್ಲ ಎಂದು ವರದಿಯಾಗಿದೆ.