“ಮುಖ್ಯ ನ್ಯಾಯಮೂರ್ತಿ ಎಸ್.ಎ.ಬಾಬ್ಡೆ ಅವರ ಶಿಫಾರಸು ಮೇರೆಗೆ ಉತ್ತರಾಧಿಕಾರಿಯಾಗಿ ನ್ಯಾಯಮೂರ್ತಿ ಎನ್.ವಿ.ರಮಣ ಆಯ್ಕೆ”

0
96

ಬೆಂಗಳೂರು,ಏಪ್ರಿಲ್,06,2021(www.justkannada.in) : ನಿವೃತ್ತರಾಗಲಿರುವ ಭಾರತದ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬಾಬ್ಡೆ ಅವರು ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ, ನ್ಯಾಯಮೂರ್ತಿ ಎನ್.ವಿ.ರಮಣ ಅವರನ್ನು ತಮ್ಮ ಉತ್ತರಾಧಿಕಾರಿಯಾಗಿ ಶಿಫಾರಸು ಮಾಡಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇಮಕ ಮಾಡಿದ್ದಾರೆ.Illegally,Sand,carrying,Truck,Seized,arrest,driverಏಪ್ರಿಲ್ 24 ರಂದು ಪ್ರಮಾಣ ವಚನ ಸ್ವೀಕರ

ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಎನ್.ವಿ.ರಮಣ ಅವರು ಏಪ್ರಿಲ್ 24 ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಆಗಸ್ಟ್ 27, 1957 ರಂದು ಆಂಧ್ರಪ್ರದೇಶದ ಕೃಷ್ಣ ಜಿಲ್ಲೆಯ ಕೃಷಿ ಕುಟುಂಬದಲ್ಲಿ ಜನಿಸಿದ ನ್ಯಾಯಮೂರ್ತಿ ರಮಣ ಅವರು 2020ರ ಆಗಸ್ಟ್ 26ರವರೆಗೆ ಒಂದು ವರ್ಷ ಮತ್ತು ನಾಲ್ಕು ತಿಂಗಳುಗಳ ಕಾಲ ದೇಶದ ಉನ್ನತ ನ್ಯಾಯಾಧೀಶರಾಗಲಿದ್ದಾರೆ.

ಆಂಧ್ರಪ್ರದೇಶದಿಂದ ಬಂದ ಭಾರತದ ಎರಡನೇ ಮುಖ್ಯ ನ್ಯಾಯಮೂರ್ತಿ

Chief Judge-S.A.Babde-Recommended-successor-Judge-NV Ramana-Choose 

ಆಂಧ್ರಪ್ರದೇಶದಿಂದ ಬಂದ ಭಾರತದ ಎರಡನೇ ಮುಖ್ಯ ನ್ಯಾಯಮೂರ್ತಿಯಾಗಲಿದ್ದಾರೆ. ಸುಮಾರು ನಾಲ್ಕು ದಶಕಗಳ ಸುದೀರ್ಘ ವೃತ್ತಿಜೀವನದಲ್ಲಿ, ನ್ಯಾಯಮೂರ್ತಿ ರಮಣ ಆಂಧ್ರಪ್ರದೇಶದ ಹೈಕೋರ್ಟ್, ಕೇಂದ್ರ ಮತ್ತು ಆಂಧ್ರಪ್ರದೇಶದ ಆಡಳಿತ ನ್ಯಾಯಮಂಡಳಿಗಳು ಮತ್ತು ಭಾರತದ ಸುಪ್ರೀಂ ಕೋರ್ಟ್ ನಲ್ಲಿ ನಾಗರಿಕ, ಅಪರಾಧ, ಸಾಂವಿಧಾನಿಕ, ಕಾರ್ಮಿಕ, ಸೇವೆ ಮತ್ತು ಚುನಾವಣಾ ವಿಷಯಗಳಲ್ಲಿ ಅಭ್ಯಾಸ ಮಾಡಿದ್ದಾರೆ.

key words : Chief Judge-S.A.Babde-Recommended-successor-Judge-NV Ramana-Choose