ಕಲ್ಲಿದ್ದಲು ಕೊರತೆಯಾಗದಂತೆ ಪೂರೈಸಲು ಕೇಂದ್ರ ಸಚಿವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ

ಬೆಂಗಳೂರು, ಅಕ್ಟೋಬರ್ 10, 2021 (www.justkannada.in): ಕಲ್ಲಿದ್ದಲು ಕೊರತೆ ನೀಗಿಸಲು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರಿಗೆ ಮನವಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕಲ್ಲಿದ್ದಲ್ಲಿನ ಕೊರತೆ ಇಡೀ ದೇಶವನ್ನು ಬಾಧಿಸುತ್ತಿದೆ. ಕರ್ನಾಟದಕದಲ್ಲಿ ಕಲ್ಲಿದ್ದಲಿನ ಸಂಗ್ರಹ ಕಡಿಮೆಯಾಗಬಾರದೆಂಬ ದೃಷ್ಟಿಯಿಂದ ಸಚಿವ ಪ್ರಹ್ಲಾದ್ ಜೋಷಿ ಅವರಿಗೆ ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಸ್ತುತ ಸರಬರಾಜಾಗುತ್ತಿರುವ 10 ರೇಕ್ ಕಲ್ಲಿದ್ದಲ್ಲನ್ನು ಹಚ್ಚಿಸಿ 14 ರೇಕ್ ಸರಬರಾಜು ಮಾಡಲು ಒಪ್ಪಿಗೆ ಸೂಚಿಸಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.

key words: Chief Minister Basavaraj Bommai appeals to Union Minister to make distribute coal as usual