ಮುಖ್ಯಮಂತ್ರಿಗಳೇ ರಾಜ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಮಾಡಿ- ಎಂಎಲ್ ಸಿ ಹೆಚ್.ವಿಶ್ವನಾಥ್ ಆಗ್ರಹ….

ಮೈಸೂರು,ಮೇ,1,2021(www.justkannada.in): ಅರ್ಧ ಲಾಕ್ ಡೌನ್ ಮಾಡುವುದರಿಂದ ಸೋಂಕು ಹರಡುವಿಕೆ ನಿಯಂತ್ರಿಸಲು ಆಗುವುದಿಲ್ಲ.ಹೀಗಾಗಿ ಮುಖ್ಯಮಂತ್ರಿಗಳೇ ರಾಜ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಮಾಡಿ ಎಂದು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಆಗ್ರಹಿಸಿದ್ದಾರೆ.jk

ಮೈಸೂರಿನಲ್ಲಿ ಮಾಧ್ಯಮಗಳ ಜತೆ ಇಂದು ಮಾತನಾಡಿದ ಬಿಜೆಪಿ ಎಂಎಲ್ ಸಿ ಹೆಚ್.ವಿಶ್ವನಾಥ್, ಕರ್ನಾಟಕದಲ್ಲಿ ದಿನೇ ದಿನೇ ಕೊರೋನಾ ಸೋಂಕು ಹೆಚ್ಚುತ್ತಿದೆ. ರಾಜ್ಯದಲ್ಲಿ ಅರ್ಥ ಲಾಕ್ ಡೌನ್ ಮಾಡುವುದರಿಂದ ಸೋಂಕು ನಿಯಂತ್ರಣ ಸಾಧ್ಯವಿಲ್ಲ. ಹೀಗಾಗಿ ಸಂಪೂರ್ಣ ಲಾಕ್ ಡೌನ್ ಮಾಡಿ ಎಂದು ಸಲಹೆ ನೀಡಿದರು.chief-minister-complete-lock-down-state-mlc-h-vishwanath-urges

ಕರ್ಫ್ಯೂ ವೇಳೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಮಾಡಿಕೊಡಲಾಗಿದೆ. ಹೀಗಾಗಿ ಜನರು ಗುಂಪು ಗುಂಪಾಗಿ ಹೊರಗೆ ಬರುತ್ತಿದ್ದಾರೆ. ಜನರು ಗುಂಪುಗೂಡುವಿಕೆಯಿಂದ ಕೊರೋನಾ ಹರಡುವಿಕೆ ಹೆಚ್ಚಾಗುತ್ತಿದೆ. ಕೊರೋನಾಗೆ ಕಡಿವಾಣ ಹಾಕಲು ರಾಜ್ಯ ಸಂಪೂರ್ಣ ಲಾಕ್ ಡೌನ್ ಮಾಡಿ ಎಂದು ಹೆಚ್.ವಿಶ್ವನಾಥ್ ಆಗ್ರಹಿಸಿದರು.

Key words: Chief minister- complete- lock down – state- MLC H. Vishwanath -urges.