BREAKING NEWS: ಮುಖ್ಯಮಂತ್ರಿಯಾಗಿ ಮುಂದುವರಿಕೆ : ಸಿದ್ದರಾಮಯ್ಯ ಶಾಕಿಂಗ್‌ ಹೇಳಿಕೆ .!

Continuing as Chief Minister: Siddaramaiah's shocking statement! This is the first time that CM Siddaramaiah has made a different statement regarding the change of Chief Minister. Siddaramaiah, who was confidently saying that he would complete five years himself, has now pointed the finger at the high command.

 

ಮಂಗಳೂರು, ಅಕ್ಟೋಬರ್ 27:  ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಇದೇ ಮೊದಲ ಬಾರಿಗೆ ಸಿಎಂ ಸಿದ್ದರಾಮಯ್ಯ ಭಿನ್ನ ಹೇಳಿಕೆ. ಈತನಕ ನಾನೇ ಐದು ವರ್ಷ ಪೂರೈಸುವೆ ಎಂದು ವಿಶ್ವಾಸದಿಂದ ನುಡಿಯುತ್ತಿದ್ದ ಸಿದ್ದರಾಮಯ್ಯ, ಇದೀಗ ಹೈಕಮಾಂಡ್‌ ನತ್ತ ಬೊಟ್ಟು ಮಾಡಿದ್ದಾರೆ.

ಅವರು ಇಂದು ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಮುಖ್ಯಮಂತ್ರಿ ಬದಲಾವಣೆ ಬಗ್ಗೆ ವಿವಿಧ ಸಚಿವರು ಹೇಳಿಕೆ ನೀಡುತ್ತಿರುವ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸುತ್ತಾ, ಪ್ರಜಾಪ್ರಭುತ್ವದಲ್ಲಿ  ಮುಖ್ಯಮಂತ್ರಿಗಳ ಸ್ಥಾನಕ್ಕೆ ಸ್ಪರ್ಧಿಸುವ ಹಕ್ಕು ಎಲ್ಲರಿಗೂ ಇದೆ. ಆದರೆ ಈ ಬಗ್ಗೆ ಅಂತಿಮ ನಿರ್ಧಾರ ಹೈಕಮಾಂಡ್ ಗೆ ಸೇರಿದ್ದಾಗಿದೆ. ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದರಲ್ಲಿಯೂ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಹೇಳಿಕೆ ನೀಡುವ ಮೂಲಕ ಉಬ್ಬೇರಿಸುವಂತೆ ಮಾಡಿದರು.

ದ್ವೇಷ ಭಾಷಣ ಮಾಡಿದ್ರೆ ಎಫ್.ಐ.ಆರ್‌ :

ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿ,  ದ್ವೇಷಪೂರಿತ ಭಾಷಣ ಮಾಡುವವರ ಮೇಲೆ ಎಫ್ ಐ ಆರ್ ದಾಖಲಾಗುತ್ತದೆ. ಅವರು ಮಹಿಳೆಯರಿಗೆ ಅಗೌರವವಾಗಿ ಭಾಷಣದಲ್ಲಿ ಮಾತನಾಡಿದ್ದಾರೆ ಎಂದರು.

ಎಸ್ ಐ ಟಿ ವರದಿ

ಧರ್ಮಸ್ಥಳ ಪ್ರಕರಣದ ಬಗ್ಗೆ ಎಸ್ ಐ ಟಿ ವರದಿ ಸಲ್ಲಿಕೆ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ,  ಎಸ್ ಐ ಟಿ ಯಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ. ಈ ತಿಂಗಳಾಂತ್ಯದಲ್ಲಿ ಎಸ್ ಐ ಟಿ ವರದಿಯ ಸಲ್ಲಿಕೆಯಾಗಲಿದೆ ಎಂದು ಎಸ್ ಐ ಟಿ ತಿಳಿಸಿರುವುದಾಗಿ ಗೃಹಸಚಿವರು ತಿಳಿಸಿರುವುದಾಗಿ ತಿಳಿಸಿದರು.

ವಾಹನ ಸೌಲಭ್ಯ

ವಾರ್ತಾ ಇಲಾಖೆಗೆ ವಾಹನ ಸೌಲಭ್ಯದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಪತ್ರಕರ್ತರ ಅನುಕೂಲಕ್ಕಾಗಿ ವಾರ್ತಾ ಇಲಾಖೆ ವಾಹನ ಒದಗಿಸುವ ಬಗ್ಗೆ ಪರಿಶೀಲಿಸಲಾಗುವುದು ಎಂದರು.

key words: BREAKING NEWS, Continuing as Chief Minister, Siddaramaiah’s shocking statement

SUMMARY: 

BREAKING NEWS: Continuing as Chief Minister: Siddaramaiah’s shocking statement!

Continuing as Chief Minister: Siddaramaiah’s shocking statement! This is the first time that CM Siddaramaiah has made a different statement regarding the change of Chief Minister. Siddaramaiah, who was confidently saying that he would complete five years himself, has now pointed the finger at the high command.