Tuesday, August 18, 2026

BDA Apartments

Home Front Page ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿಗೆ ಅನಾರೋಗ್ಯ: ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿಗೆ ಅನಾರೋಗ್ಯ: ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ

ಬೆಂಗಳೂರು, ಜೂನ್ 21, 2023 (www.justkannada.in): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಜ್ವರದಿಂದ ಬಳಲುತ್ತಿದ್ದ ಅವರನ್ನು ನಿನ್ನೆ ರಾತ್ರಿ 11.30 ರ ಸುಮಾರಿಗೆ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ ಕೆಲ ದಿನಗಳಿಂದ ಪಾರ್ವತಿ ಅವರು ಜ್ವರದಿಂದ ಬಳಲುತ್ತಿದ್ದರು ಎನ್ನಲಾಗಿದೆ.

ಸಿದ್ದರಾಮಯ್ಯ ದೆಹಲಿ ಪ್ರವಾಸ ಕೈಗೊಂಡಿದ್ದಾರೆ. ಇಂದು ಬೆಳಗ್ಗೆ ದೆಹಲಿಗೆ ತೆರಳಬೇಕಿತ್ತು. ಆದರೆ ಪತ್ನಿ ಅನಾರೋಗ್ಯದ ಹಿನ್ನೆಲೆಯಲ್ಲಿ ದೆಹಲಿಗೆ ತೆರಳುವ ಮುನ್ನ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ.