Saturday, September 26, 2026

BDA Apartments

ವಿಶ್ವೇಶತೀರ್ಥ ಶ್ರೀಗಳ ಒಡನಾಟ ನೆನೆಪು ಭಾವುಕರಾದ ಮುಖ್ಯಮಂತ್ರಿ ಯಡಿಯೂರಪ್ಪ...
Home Front Page ವಿಶ್ವೇಶತೀರ್ಥ ಶ್ರೀಗಳ ಒಡನಾಟ ನೆನೆಪು ಭಾವುಕರಾದ ಮುಖ್ಯಮಂತ್ರಿ ಯಡಿಯೂರಪ್ಪ

ವಿಶ್ವೇಶತೀರ್ಥ ಶ್ರೀಗಳ ಒಡನಾಟ ನೆನೆಪು ಭಾವುಕರಾದ ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು, ಡಿಸೆಂಬರ್ 29, 2019 (www.justkannada.in): ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪೇಜಾವರ ಮಠದ ಹಿರಿಯ ಯತಿಗಳಾದ ವಿಶ್ವೇಶತೀರ್ಥ ಸ್ವಾಮೀಜಿ ಒಡನಾಟ ನೆನೆದು ಭಾವುಕರಾದರು.

ನಾನು ಸ್ವಾಮೀಜಿ ಜೊತೆಗೆ ಕಳೆದ 50 ವರ್ಷಗಳಿಂದ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದೆ. ಅವರು ಅಯೋಧ್ಯೆಯಲ್ಲಿ ರಾಮನ ವಿಗ್ರಹ ಪ್ರತಿಷ್ಠಾಪನೆಗೆ ಹೋದಾಗ ಅವರ ಜೊತೆಗೆ ನಾನೂ ಇದ್ದೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆಗಬೇಕು ಎಂಬ ಕನಸು ಅವರದ್ದಾಗಿತ್ತು. ಈಗ ಸುಪ್ರೀಂ ಕೋರ್ಟ್‌ ಸಹ ಅದೇ ತೀರ್ಪು ನೀಡಿದೆ. ಆದರೆ ರಾಮಮಂದಿರ ನೋಡಲು ಅವರಿಗೆ ಆಗಲಿಲ್ಲ ಎಂದು ಹೇಳಿದರು.

ನಮ್ಮ ದೇಶದ ಇತಿಹಾಸದಲ್ಲಿ ಯಾವುದೇ ಸ್ವಾಮೀಜಿ ಹೀಗೆ ದೇಶದ ಉದ್ದಗಲಕ್ಕೆ ಪ್ರವಾಸ ಮಾಡಿದ್ದು ನಾನು ನೋಡಿಲ್ಲ. ಆಸ್ಪತ್ರೆ ಸೇರುವ ಎರಡು ದಿನ ಹಿಂದೆಯೂ ಪ್ರವಾಸ ಮಾಡಿದ್ದರು. ಇಂಥ ಅಪರೂಪದ ಯತಿವರೇಣ್ಯ ಸಿಗುವುದು ಕಷ್ಟ. ಅಂಥ ಮಹಾನ್ ಪೂಜ್ಯರನ್ನು ಕಳೆದುಕೊಂಡು ದೇಶ ಬಡವಾಗಿದೆ ಎಂದು ವಿಷಾದಿಸಿದರು.