Thursday, September 24, 2026

BDA Apartments

Home Front Page ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಫೋಟ : ಸಂಪೂರ್ಣ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಲು ಸಿಎಂ...

ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಫೋಟ : ಸಂಪೂರ್ಣ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಲು ಸಿಎಂ ಬಿ.ಎಸ್.ವೈ ಸೂಚನೆ

ಬೆಂಗಳೂರು,ಫೆಬ್ರವರಿ,23,2021(www.justkannada.in) : ಚಿಕ್ಕಬಳ್ಳಾಪುರದ ಹಿರೇನಾಗವಲ್ಲಿ ಗ್ರಾಮದ ಬಳಿ ಜಿಲೆಟಿನ್ ಸ್ಫೋಟದಿಂದ ಆರು ಮಂದಿ ಸಾವನ್ನಪ್ಪಿರುವುದು ತೀವ್ರ ಆಘಾತ ತಂದಿದೆ. ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗುತ್ತಿದ್ದು, ಪ್ರಕರಣದ ಸಂಪೂರ್ಣ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ಮೃತರ ಆತ್ಮಕ್ಕೆ ಶಾಂತಿಯನ್ನು ಕೋರುತ್ತಾ, ಅವರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ.

Chikkaballapur-Gelatine-explosion-Investigate-thoroughly-guilty-opposite-Tough-action-CM B.S.Y.-NOTE

ಈ ದುರ್ಘಟನೆ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಯುತ್ತಿದ್ದು, ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳೀದ್ದಾರೆ.

key words : Chikkaballapur-Gelatine-explosion-Investigate-thoroughly-guilty-opposite-Tough-action-CM B.S.Y.-NOTE