ಚಿಕ್ಕಬಳ್ಳಾಪುರ ನಗರಸಭೆಯಲ್ಲಿ ‘ಕೈ’ ಜಯಭೇರಿ: ಹೊಸಕೋಟೆ ನಗರಸಭೆ ‘ಬಿಜೆಪಿ’ ತೆಕ್ಕೆಗೆ….

ಬೆಂಗಳೂರು,ಫೆ,11,2020(www.justkannada.in): ತೀವ್ರ ಕುತೂಹಲ  ಮೂಡಿಸಿದ್ದ ಚಿಕ್ಕಬಳ್ಳಾಪುರ, ಹೊಸಕೋಟೆ  ನಗರಸಭೆ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಚಿಕ್ಕಬಳ್ಳಾಪುರದಲ್ಲಿ ಸಚಿವ ಡಾ.ಕೆ ಸುಧಾಕರ್ ಮುಖಭಂಗ ಅನುಭವಿಸಿದ್ದಾರೆ.

ಚಿಕ್ಕಬಳ್ಳಾಪುರ ನಗರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದ್ದರೇ ಹೊಸಕೋಟೆ ನಗರಸಭೆಯಲ್ಲಿ ಕಮಲ ಅರಳಿದೆ. 31 ಕ್ಷೇತ್ರಗಳ ಚಿಕ್ಕಬಳ್ಳಾಪುರ ನಗರಸಭೆಯ 31 ಕ್ಷೇತ್ರಗಳ ಪೈಕಿ ಕಾಂಗ್ರೆಸ್ 16, ಬಿಜೆಪಿ9, ಜೆಡಿಎಸ್ 2, ಪಕ್ಷೇತರ 4 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿರುವ ಡಾ.ಕೆ. ಸುಧಾಕರ್ ಅವರಿಗೆ ಮುಖಭಂಗವಾದಂತಾಗಿದೆ.

ಇನ್ನು ಹೊಸಕೋಟೆ ನಗರಸಭೆ ಚುನಾವಣೆಯಲ್ಲಿ ಬಿಜೆಪಿ 22 ಕ್ಷೇತ್ರದಲ್ಲಿ ಶಾಸಕ ಶರತ್ ಬಚ್ಚೇಗೌಡ ಬೆಂಬಲಿತ 7 ಅಭ್ಯರ್ಥಿಗಳು, ಜೆಡಿಎಸ್ 3 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಇನ್ನು  ಕಾಂಗ್ರೆಸ್ ಶೂನ್ಯ ಸಂಪಾದಿಸಿದ್ದು, ತೀವ್ರ ಹಿನ್ನಡೆಯಾಗಿದೆ.

 

Key words: chikkaballapur-hoskote- municipality –bjp- congress