Thursday, August 20, 2026

BDA Apartments

Home Crime ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು: ಮೂವರು ಸಾವು…

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು: ಮೂವರು ಸಾವು…

ಚಿಕ್ಕಮಗಳೂರು,ಅ,25,2019(www.justkannada.in):  ಚಾಲಕನ ನಿಯಂತ್ರಣ ತಪ್ಪಿದ ಕಾರು ಹಳ್ಳಕ್ಕೆ ಬಿದ್ದು ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಡವನದಿಣ್ಣೆ ಬಳಿ ಈ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿನ ನೀರಿನ ಹಳ್ಳಕ್ಕೆ ಕಾರು ಉರುಳಿ ಬಿದ್ದಿದೆ.  ಕಾರಿನಲ್ಲಿದ್ದ ಐವರ ಪೈಕಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.  ಘಟನೆಯಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಮೂಡಿಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತಪಟ್ಟವರು ಬೆಂಗಳೂರು ಮೂಲದವರು ಎಂಬ ಮಾಹಿತಿ ಲಭ್ಯವಾಗಿದೆ. ಈ ಕುರಿತು ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: chikkamagalore- driver- control –car-three death