ಸೂಕ್ಷ್ಮ ಪ್ರದೇಶದಲ್ಲಿ ಸಾವರ್ಕರ್ ಫೋಟೊ ಹಾಕಬೇಡಿ ಎಂದಿದ್ದೇ ತಪ್ಪಾ..? ಮಾಜಿ ಸಿಎಂ ಸಿದ್ಧರಾಮಯ್ಯ.

ಚಿಕ್ಕಮಗಳೂರು,ಆಗಸ್ಟ್,19,2022(www.justkannada.in):  ಮುಸ್ಲೀಂ ಏರಿಯಾದಲ್ಲಿ ಸಾವರ್ಕರ್ ಫೋಟೊ ಹಾಕಿದ್ದೇಕೆ ಎಂದು ಹೇಳಿಕೆ ನೀಡಿದ ಬೆನ್ನಲ್ಲೆ ಹಲವು ಟೀಕೆಗಳಿಗೆ ಗುರಿಯಾಗಿದ್ದ ವಿಪಕ್ಷ ನಾಯಕ ಸಿದ‍್ಧರಾಮಯ್ಯ ಇದೀಗ ತಮ್ಮ ಹೇಳಿಕೆ ಕುರಿತು ಸ್ಪಷ್ಟನೆ ನೀಡಿದ್ದಾರೆ.

ಸಾವರ್ಕರ್ ಕ್ಷಮಾಪಣಾ ಬರೆದುಕೊಟ್ಟು ಜೈಲಿನಿಂದ ಹೊರಬಂದಿದ್ದು. ಸೂಕ್ಷ್ಮ ಪ್ರದೇಶದಲ್ಲಿ ಸಾವರ್ಕರ್ ಫ್ಲೆಕ್ಸ್ ಹಾಕಿದ್ದೇಕೆ ಎಂದಿದ್ದೆ. ನನ್ನ ಹೇಳಿಕೆಯಲ್ಲಿ ತಪ್ಪೇನಿದೆ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಪ್ರಶ್ನಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಇಂದು ಮಾತನಾಡಿದ ಸಿದ್ಧರಾಮಯ್ಯ, ನಾವು ಸತ್ಯ ಹೇಳುವುದೇ ತಪ್ಪಾಗಿ ಹೋಗಿದೆ. ಬಿಜೆಪಿಯವರು ನೀಚಮಟ್ಟಕ್ಕೆ ಇಳಿದು ರಾಜಕೀಯ ಮಾಡುತ್ತಿದ್ದಾರೆ. ನಾವು ಆರ್ ಎಸ್  ಮತ್ತು ಬಿಜೆಪಿ ಯಾವುದೇ ಬೆದರಿಕೆಗಳಿಗೆ ಬಗ್ಗಲ್ಲ. ರಾಜಕೀಯವನ್ನ ರಾಜಕೀಯವಾಗಿಯೇ ಎದುರಿಸುತ್ತೇವೆ. ಅವರು ಪ್ರತಿಭಟನೆ ಮಾಡಿದರೇ ನಾವೂ ಪ್ರತಿಭಟನೆ ಮಾಡುತ್ತೇವೆ ಎಂದರು.

Key words: chikkamagalore-Former CM-Siddaramaiah-VD Savarkar