ಮಳೆಗೆ ಮನೆ ಕುಸಿದು ಗಾಯಗೊಂಡಿದ್ದ ಮಗು ಸಾವು.

ಹಾವೇರಿ,ಜುಲೈ,25,2023(www.justkannada.in): ಭಾರಿ ಮಳೆಗೆ ಮನೆ ಕುಸಿದು ಗಾಯಗೊಂಡಿದ್ದ ಮಗು ಸಾವನ್ನಪ್ಪಿರುವ ಘಟನೆ  ಹಾವೇರಿಯಲ್ಲಿ ನಡೆದಿದೆ.

ಹಾವೇರಿ ತಾಲೂಕಿನ ಮಾಳಪುರ ಗ್ರಾಮದಲ್ಲಿ ಈ ಘಟನ ನಡೆದಿದ್ದು, ಎರಡು ದಿನಗಳ ಹಿಂದೆ ಮನೆಕುಸಿದು ಗಾಯಗೊಂಡಿದ್ದ ಭಾಗ್ಯಮೂರು ವರ್ಷದ ಮಗುವನ್ನ ಹುಬ್ಬಳ್ಳಿ ಕಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇದೀಗ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಬಾಲಕಿ ಕೊನೆಯುಸಿರೆಳೆದಿದ್ದಾಳೆ. ಈ ಕುರಿತು ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words:  child –death-house- collapsed – rain