ಶಾಲಾ ಕಾಲೇಜು ವಿದ್ಯಾರ್ಥಿಗಳಿಗಾಗಿ ಮಕ್ಕಳ ಬಸ್​ ಯೋಜನೆ: 1,230 ಶಾಲಾ ಕೊಠಡಿ ನಿರ್ಮಾಣ:  ಬಜೆಟ್ ನಲ್ಲಿ ಘೋಷಣೆ.

ಬೆಂಗಳೂರು,ಫೆಬ್ರವರಿ,17,2023(www.justkannada.in):  ರಾಜ್ಯದಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗಾಗಿ ಮಕ್ಕಳ ಬಸ್​ ಯೋಜನೆ ಹಾಗೂ ರಾಜ್ಯದ ಎಲ್ಲಾ ಪ್ರೌಢ ಶಾಲಾ ವಿದ್ಯಾರ್ಥಿಗಳ ಉನ್ನತ ಶಿಕ್ಷಣ ದೃಷ್ಟಿಯಿಂದ ಮುಖ್ಯಮಂತ್ರಿ ವಿದ್ಯಾಶಕ್ತಿ ಯೋಜನೆ ಆರಂಭ ಮಾಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

ಇಂದು ಬಜೆಟ್ ಮಂಡನೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ,  ರಾಜ್ಯದಲ್ಲಿ ಹೆಚ್ಚುವರಿಯಾಗಿ 2022-2023ನೇ ಸಾಲಿನಲ್ಲಿ 1,230 ಶಾಲಾ ಕೊಠಡಿ ನಿರ್ಮಾಣ. ರಾಜ್ಯದಲ್ಲಿ ಹೊಸದಾಗಿ 7 ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಲಾಗುತ್ತದೆ.  47 ವಸತಿ ಶಾಲೆಗಳ ದುರಸ್ತಿ ಸ್ಮಾರ್ಟ್ ಕ್ಲಾಸ್. 30 ಕಸ್ತೂರಿ ಬಾಗಾಂಧಿ ವಸತಿ ಶಾಲೆ ಹೈಟೆಕ್ , ಎಲ್ಲಾ ವಿವಿಗಳಲ್ಲಿ ಕನ್ನಡದಲ್ಲಿ ಪರೀಕ್ಷೆಗೆ ವ್ಯವಸ್ಥೆ .ಇದಕ್ಕಾಗಿ ರೆಫರೆನ್ಸ್ ಪುಸ್ತಕ ಪರಿಚಯಿಸಲು ಕ್ರಮ,  24 347 ಶಾಲೆಗಳಲ್ಲಿ ರೀಡಿಂಗ್ ಕಾರ್ನರ್ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದರು.

ಅಭಿವೃದ್ದಿ ಆಕಾಂಕ್ಷಿ ತಾಲೂಕೂಗಳಲ್ಲಿ ಶಿಕ್ಷಣ ಆರೋಗ್ಯ ಮತ್ತು ಪೌಷ್ಟಿಕತೆಗೆ 3000 ಕೋಟಿ ರೂ. ಅನುದಾನ ಶಾಲಾ ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕೆ ಮಕ್ಕಳ ಬಸ್​ ಯೋಜನೆ ಆರಂಭಿಸಲಾಗುವುದು. ಶಾಲಾ ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕೆ ಮಕ್ಕಳ ಬಸ್​ ಯೋಜನೆ ಆರಂಭಿಸಲಾಗುವುದು. 100 ಕೋಟಿ ವೆಚ್ಚದಲ್ಲಿ ಮಕ್ಕಳ ಬಸ್​ ಯೋಜನೆ ಅನುಷ್ಠಾನಗೊಳ್ಳಲಿದ್ದು, 2 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಅಭಿವೃದ್ದಿ ಆಕಾಂಕ್ಷಿ ತಾಲೂಕೂಗಳಲ್ಲಿ ಶಿಕ್ಷಣ ಆರೋಗ್ಯ ಮತ್ತು ಪೌಷ್ಟಿಕತೆಗೆ 3000 ಕೋಟಿ ರೂ. ಅನುದಾನ ನೀಡಲಾಗುವುದು. ರಾಜ್ಯದ ಎಲ್ಲಾ ಪ್ರೌಢ ಶಾಲಾ ವಿದ್ಯಾರ್ಥಿಗಳ ಉನ್ನತ ಶಿಕ್ಷಣ ದೃಷ್ಟಿಯಿಂದ ಮುಖ್ಯಮಂತ್ರಿ ವಿದ್ಯಾಶಕ್ತಿ ಯೋಜನೆ ಆರಂಭಿಸಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ.

Key words: Children’s -Bus- Scheme- Construction – 1,230 School –Rooms-Budget.