ಇಂದು ಚಿತ್ರದುರ್ಗ ಜಿಲ್ಲೆ ಬಂದ್: ವಿವಿಧ ಸಂಘಟನೆಗಳಿಂದ ಬೆಂಬಲ.

ಚಿತ್ರದುರ್ಗ, ಜನವರಿ,23,2024(www.justkannada.in):   ಭದ್ರಾ ಮೇಲ್ದಂಡೆ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಜಿಲ್ಲಾ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ನೇತೃತ್ವದಲ್ಲಿ ಇಂದು ಚಿತ್ರದುರ್ಗ ಜಿಲ್ಲೆ ಬಂದ್​ಗೆ ಕರೆ ಕೊಡಲಾಗಿದೆ.

ಚಿತ್ರದುರ್ಗ ಜಿಲ್ಲೆ ಸ್ವಯಂಪ್ರೇರಿತ ಬಂದ್​​ ಗೆ ಕರೆ ನೀಡಲಾಗಿದ್ದು,  ರೈತಪರ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು, ಪ್ರಗತಿಪರ ಸಂಘಟನೆಗಳು ಬಂದ್​ಗೆ ಬೆಂಬಲಿಸಿವೆ. ಇಂದು ಬೆಳಗ್ಗೆ 6:30ರಿಂದ ಚಿತ್ರದುರ್ಗದ ಗಾಂಧಿ ವೃತ್ತದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ.

ಚಿತ್ರದುರ್ಗದ ಗಾಂಧಿ ವೃತ್ತದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಪ್ರತಿಭಟನೆ ಹಿನ್ನೆಲೆ ರೈತ ಮುಖಂಡರು ಜಮಾಯಿಸಿದ್ದಾರೆ. ಭದ್ರಾ ಮೇಲ್ದಂಡೆ ಯೋಜನೆ ಶೀಘ್ರ ಅನುಷ್ಠಾನಕ್ಕೆ ಆಗ್ರಹಿಸಿದ್ದಾರೆ. ಚಿತ್ರದುರ್ಗ ನಗರದಲ್ಲಿ ಬಹುತೇಕ ಅಂಗಡಿ ಮುಂಗಟ್ಟು ಬಂದ್ ಆಗಿವೆ. ಚಿತ್ರದುರ್ಗ ನಗರದಲ್ಲಿ ಬಹುತೇಕ ಸರ್ಕಾರಿ ಖಾಸಗಿ ಶಾಲಾ ಕಾಲೇಜುಗಳು ಬಂದ್ ಆಗಿವೆ ಎಂಬ ಮಾಹಿತಿ ಲಭ್ಯವಾಗಿದೆ.

Key words: Chitradurga- district- bandh -today