ಭಿನ್ನಮತದ ಪ್ರಶ್ನೆಯೇ ಇಲ್ಲ: ಮುಂದೆ ಸಚಿವನಾಗುವ ವಿಶ್ವಾಸವಿದೆ- ಶಾಸಕ ಜಿ.ಹೆಚ್ ತಿಪ್ಪಾರೆಡ್ಡಿ ಹೇಳಿಕೆ…

ಚಿತ್ರದುರ್ಗ,ಆ,22,2019(www.justkannada.in): ಪಕ್ಷದಲ್ಲಿ ಭಿನ್ನಮತದ ಪ್ರಶ್ನೆಯೇ ಇಲ್ಲ. ನಾನು ಮುಂದೆ ಸಚಿವನಾಗುವ ವಿಶ್ವಾಸವಿದೆ ಎಂದು ಚಿತ್ರದುರ್ಗ ಬಿಜೆಪಿ ಶಾಸಕ ಜಿ.ಎಚ್ ತಿಪ್ಪಾರೆಡ್ಡಿ ತಿಳಿಸಿದ್ದಾರೆ.

ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಸಚಿವ ಸಂಪುಟ ರಚನೆ ಬೆನ್ನಲ್ಲೆ ಬಿಜೆಪಿಯಲ್ಲಿ ಅಸಮಾಧಾನ ಸ್ಪೋಟಗೊಂಡಿದ್ದು ಸಚಿವ ಸ್ಥಾನ ಕೈ ತಪ್ಪಿದಕ್ಕೆ ಕೆಲ ಶಾಸಕರು ಬೇಸರ ವ್ಯಕ್ತಪಡಿಸಿದ್ದರು. ಈ ನಡುವೆ ಮಂತ್ರಿಗಿರಿ ಕೈತಪ್ಪಿದ್ದಕ್ಕೆ ಅಸಮಾಧಾನ ಹೊರ ಹಾಕಿದ್ದ ಜಿ.ಎಚ್ ತಿಪ್ಪರೆಡ್ಡಿ ಇದೀಗ ಯಾವುದೇ ಅಸಮಾಧಾನವಿಲ್ಲ ಎಂದಿದ್ದಾರೆ.

ಈ ಕುರಿತು ಚಿತ್ರದುರ್ಗದಲ್ಲಿ ಪ್ರತಿಕ್ರಿಯಿಸಿರುವ ಶಾಸಕ ತಿಪ್ಪಾರೆಡ್ಡಿ, ಮುಂದೆ ಸಚಿವನಾಗುವ ವಿಶ್ವಾಸವಿದೆ. ಮುಂದಿನ ಪಟ್ಟಿಯಲ್ಲಿ ನನ್ನ ಹೆಸರು ಇರುವ ನಿರೀಕ್ಷೆ ಇದೆ. ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ ಭೇಟಿಯಾಗಿ ಚರ್ಚಿಸಿದ್ದೇನೆ. ನಿಮ್ಮ ಜವಾಬ್ದಾರಿ ನಮ್ಮ ಮೇಲೆ ಬಿಡಿ ಎಂದಿದ್ದಾರೆ. ಹೀಗಾಗಿ ಪಕ್ಷದಲ್ಲಿ ಬಂಡಾಯ ಭಿನ್ನಮತದ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

ಹಾಗೆಯೇ ಅನರ್ಹ ಶಾಸಕರಿಗೆ ಸಚಿವ ಸ್ಥಾನ ನೀಡಿದರೇ ನಾವು ವಿರೋಧಿಸಲ್ಲ ಎಂದು ಜಿ.ಹೆಚ್ ತಿಪ್ಪಾರೆಡ್ಡಿ ತಿಳಿಸಿದ್ದಾರೆ.

Key words: chitradurga- mla- GH thippareddi-no qwastion-rebel