Saturday, August 15, 2026

BDA Apartments

Home Front Page ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕ್ರಿಸ್ ಮಸ್ ಸಂಭ್ರಮ: ಸೆಂಟ್ ಫಿಲೋಮಿನಾ ಚರ್ಚ್ ನಲ್ಲಿ ವಿಶೇಷ ಪ್ರಾರ್ಥನೆ….

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕ್ರಿಸ್ ಮಸ್ ಸಂಭ್ರಮ: ಸೆಂಟ್ ಫಿಲೋಮಿನಾ ಚರ್ಚ್ ನಲ್ಲಿ ವಿಶೇಷ ಪ್ರಾರ್ಥನೆ….

ಮೈಸೂರು,ಡಿ,25,2019(www.justkannada.in): ಇಂದು ವಿಶ್ವಾದ್ಯಾಂತ ಶಾಂತಿಧೂತನ ನಾಮಸ್ಮರಣೆ. ಕ್ರಿಸ್ ಮಸ್ ಹಬ್ಬದ ಸಂಭ್ರಮ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಸಹ ಕ್ರಿಸ್ಮಸ್ ಸಂಭ್ರಮ ಮನೆ ಮಾಡಿದೆ.

ನಗರದ ಸೇಂಟ್ ಫಿಲೋಮಿನಾ ಚರ್ಚ್ ಸೇರಿ ನಾನಾ ಕಡೆಯ ಪ್ರಾರ್ಥನಾ ಮಂದಿರಗಳಲ್ಲಿ ಕ್ರಿಸ್ಮಸ್ ಆಚರಣೆ ಮಾಡಲಾಗುತ್ತಿದೆ. ಸೇಂಟ್ ಫಿಲೋಮಿನಾ ಚರ್ಚ್‌ ದೇಶ ವಿದೇಶಿ ಪ್ರವಾಸಿಗರನ್ನ ಸೂಜಿಗಲ್ಲಿನಂತೆ ಆಕರ್ಷಿಸುತ್ತಿದ್ದು, ಏಸುಗೀತೆ ಹಾಡುವ ಮೂಲಕ ಕ್ರೈಸ್ತಬಾಂಧವರು ಕ್ರಿಸ್‌ಮಸ್ ಆಚರಿಸುತ್ತಿದ್ದಾರೆ. ಇತಿಹಾಸ ಪ್ರಸಿದ್ದ ಸೆಂಟ್ ಫಿಲೋಮಿನ ಚರ್ಚ್ ನಲ್ಲಿ ಕ್ರೈಸ್ಥ ಬಾಂಧವರು ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಪ್ರಾರ್ಥನೆ ಯಲ್ಲಿ ಸಾವಿರಾರು ಭಕ್ತರು ಭಾಗಿಯಾಗಿ ಧರ್ಮಗುರುಗಳ ಆಶೀರ್ವಾದ ಪಡೆದರು.

Key words: Christmas -celebration – Mysore-Special Prayer – St. Philomena’s Church