ಸಿನಿಮೀಯ ರೀತಿ ಹಲ್ಲೆ: 20 ಲಕ್ಷ ರೂ. ದೋಚಿ ಪರಾರಿಯಾದ ದುಷ್ಕರ್ಮಿಗಳು

ಬೆಂಗಳೂರು,ಮಾರ್ಚ್,5,2026 (www.justkannada.in):  ವ್ಯಕ್ತಿಯೊಬ್ಬರ ಮೇಲೆ ಸಿನಿಮೀಯ ರೀತಿ ಹಲ್ಲೆ ನಡೆಸಿದ ದುಷ್ಕರ್ಮಿಗಳು 20 ಲಕ್ಷ ರೂ. ಹಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಆಂಧ್ರ ಮೂಲದ ವಿಶ್ವ ಪ್ರಸಾದ್ ಮತ್ತು ಮತ್ತೊಬ್ಬ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಹಣ ದೋಚಲಾಗಿದೆ. ಯಲಹಂಕದಿಂದ ದೇವನಹಳ್ಳಿಗೆ ತೆರಳುತ್ತಿದ್ದ ವೇಳೆ  ನಾಲ್ಕು ಬೈಕ್ ನಲ್ಲಿ ಬಂದ ದುಷ್ಕರ್ಮಿಗಳ ಗ್ಯಾಂಗ್ ವಿಶ್ವ ಪ್ರಸಾದ್ ಮತ್ತು ಮತ್ತೊಬ್ಬ ವ್ಯಕ್ತಿಯ ಮೇಲೆ ಸಿನಿಮೀಯ ರೀತಿ ಹಲ್ಲೆ ನಡೆಸಿದ್ದಾರೆ. ಬಳಿಕ 20 ಲಕ್ಷ ರೂ. ಹಣದೊಂದಿಗೆ ಎಸ್ಕೇಪ್ ಆಗಿದ್ದಾರೆ ಎನ್ನಲಾಗಿದೆ.

ಸ್ಥಳಕ್ಕೆ ದೇವನಹಳ್ಳಿ ವಿಜಯನಗರ ಪೊಲೀಸರು  ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಕಳ್ಳರಿಗಾಗಿ ಶೋಧ ಕಾರ್ಯ ಕೈಗೊಂಡಿದ್ದಾರೆ.

Key words: Cinematic attack, looted, Rs. 20 lakh , Escape