ಮಂಗಳೂರಿನಲ್ಲಿ ತೀವ್ರಗೊಂಡ ಪ್ರತಿಭಟನೆ: ಉದ್ರಿಕ್ತರನ್ನ ಚದುರಿಸಲು ಗಾಳಿಯಲ್ಲಿ ಗುಂಡು: ಕರ್ಫ್ಯೂ ಜಾರಿ…

ಮಂಗಳೂರು, ಡಿ,19,2019(www.justkannada.in):  ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಜ್ಯಾದ್ಯಂತ ಆಕ್ರೋಶ ಭುಗಿಲೆದ್ದಿದ್ದು, ಈ ನಡುವೆ ಮಂಗಳೂರಿನಲ್ಲಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದೆ.

ನೆಲ್ಲಿಕಾಯಿ ರಸ್ತೆಯಲ್ಲಿ ತೀವ್ರ ಸ್ವರೂಪದಲ್ಲಿ ಪ್ರತಿಭಟನೆ ನಡೆದಿದ್ದು, ಉದ್ರಿಕ್ತರನ್ನ ಚದುರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.  ಪ್ರತಿಭಟನಾಕಾರರು ರಸ್ತೆಯಲ್ಲಿ ಬೆಂಕಿ ಹಚ್ಚಿ ಪ್ರತಿಭಟಿಸಿದ್ದಾರೆ. ಇನ್ನು ಪ್ರತಿಭಟನಾಕಾರರು ಪೊಲೀಸರ ಮೇಲೆಯೇ ಕಲ್ಲು ತೂರಾಟ ನಡೆಸಿದ್ದು 20ಕ್ಕೂ ಹೆಚ್ಚು ಪೊಲೀಸರಿಗೆ ಗಾಯಗಳಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ.

ಪರಿಸ್ಥಿತಿ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಮಂಗಳೂರು ಬಂದರು ಪೊಲೀಸ್ ಠಾಣೆ ಬಳಿ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದರು. ಪ್ರತಿಭಟನೆ ಉಗ್ರರೂಪಕ್ಕೆ ತಿರುಗಿದ ಹಿನ್ನೆಲೆ ನಗರದ ಕೇಂದ್ರ ಭಾಗದಲ್ಲಿ ಕರ್ಫ್ಯೂ ಜಾರಿ ಮಾಡಿ ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ.ಹರ್ಷಾ ಆದೇಶಿಸಿದ್ದಾರೆ.  ನಾಳೆ ಮಧ್ಯರಾತ್ರಿವರೆಗೂ ಕರ್ಫ್ಯೂ ಜಾರಿಯಾಗಲಿದೆ.

Key words: Citizenship Amendment Act -protest – Mangalore- curfew –police