ಚಾಮುಂಡಿ ಬೆಟ್ಟಕ್ಕೆ ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ಭೇಟಿ: ಉದ್ಘಾಟನಾ ಸಮಾರಂಭ ಸಿದ್ಧತೆ ಪರಿಶೀಲನೆ…

ಮೈಸೂರು,ಅಕ್ಟೋಬರ್,15,2020(www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಉದ್ಘಾಟನಾ ಸಮಾರಂಭ ಅಕ್ಟೋಬರ್ 17 ರಂದು ನಡೆಯಲಿದ್ದು,  ಈ ಹಿನ್ನೆಲೆ ಇಂದು ಚಾಮುಂಡಿಬೆಟ್ಟಕ್ಕೆ ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ಭೇಟಿ  ನೀಡಿ ಸಿದ್ದತೆ ಪರಿಶೀಲನೆ ನಡೆಸಿದರು.city-police-commissioner-dr-chandragupta-visit-mysore-chamundi-hills-dasara-innugration-preparation

ಅಕ್ಟೋಬರ್ 17 ರಂದು ಚಾಮುಂಡಿಬೆಟ್ಟದಲ್ಲಿ ಮೈಸೂರು ದಸರಾ ಉದ್ಘಾಟನಾ ಸಮಾರಂಭ ನಡೆಯಲಿದ್ದು ಜಯದೇವ ಆಸ್ಪತ್ರೆ ನಿರ್ದೇಶಕ ಸಿ.ಎನ್ ಮಂಜುನಾಥ್ ಅವರು ದಸರಾ ಉದ್ಘಾಟನೆ ನೆರವೇರಿಸಲಿದ್ದಾರೆ. ಈ ವೇಳೆ ಸಿಎಂ ಬಿಎಸ್ ಯಡಿಯೂರಪ್ಪ ಭಾಗಿಯಾಗಲಿದ್ದಾರೆ.city-police-commissioner-dr-chandragupta-visit-mysore-chamundi-hills-dasara-innugration-preparation

ಉದ್ಘಾಟನಾ ಸಮಾರಂಭಕ್ಕೆ ಚಾಮುಂಡಿಬೆಟ್ಟದಲ್ಲಿ ಸಕಲ ಸಿದ್ಧತೆ ಮಾಡಲಾಗುತ್ತಿದ್ದು, ಈಗಾಗಲೇ ಮೈಸೂರು ಜಿಲ್ಲಾಡಳಿತ ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ ಹೇರಿದೆ. ಹಾಗೆಯೇ ಚಾಮುಂಡಿಬೆಟ್ಟದ ಮೇಲೆ  ಪೊಲೀಸ್ ಸರ್ಪಗಾವಲು ಹಾಕಲಾಗಿದ್ದು, ಈ ಮಧ್ಯೆ ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಸಿದ್ಧತೆ ಬಗ್ಗೆ ಪರಿಶೀಲಿಸಿದರು. ಕಮಿಷನರ್ ಭೇಟಿ ವೇಳೆ  ಅಪರಾಧ ಮತ್ತು ಸಂಚಾರ ಡಿಸಿಪಿ ಗೀತಾ ಹಾಜರಿದ್ದರು.

Key words: City Police Commissioner-  Dr.Chandragupta- visit –mysore-chamundi hills-dasara innugration-Preparation