ಪೌರಕಾರ್ಮಿಕರ ಸಂರಕ್ಷಣೆ, ಆರೋಗ್ಯ, ಶಿಕ್ಷಣದ ಬಗ್ಗೆ  ಕಾನೂನನ್ನು ರಚಿಸಬೇಕು- ಸಿಎಂ ಬಸವರಾಜ ಬೊಮ್ಮಾಯಿ.

ಬೆಂಗಳೂರು,ಜುಲೈ,2,2022(www.justkannada.in): ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಆಗ್ರಹಿಸಿ ಪೌರಕಾರ್ಮಿಕರು  ನಡೆಸುತ್ತಿರುವ ಪ್ರತಿಭಟನೆ ಮುಂದುವರೆದಿದ್ದು ಈ ಕುರಿತು ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ ಬೊಮ್ಮಾಯಿ, ಪೌರಕಾರ್ಮಿಕರ ಸಂರಕ್ಷಣೆ, ಆರೋಗ್ಯ, ಶಿಕ್ಷಣದ ಬಗ್ಗೆ  ಕಾನೂನನ್ನು ರಚಿಸಬೇಕು ಎಂದಿದ್ದಾರೆ.

ಈ ಬಗ್ಗೆ  ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಪೌರಕಾರ್ಮಿಕರ ಜೊತೆಗೆ ಎಲ್ಲಾ ಮಾತನಾಡಿದ್ದೇನೆ. ಸಹಾನುಭೂತಿಯಿಂದ ಮಾನವೀಯತೆಯಿಂದ ಕ್ರಮಕೈಗೊಂಡು ಹೊಸ ಕಾನೂನು ಮಾಡಬೇಕು ಎಂದು ಅಂದುಕೊಂಡಿದ್ದೇವೆ. ಯಾವ ರೀತಿ ನೇಮಕಾತಿ ಮಾಡಬೇಕೆಂದು ಚರ್ಚೆ ಮಾಡುತ್ತೇವೆ. ಪೌರ ಕಾರ್ಮಿಕರು, ಅಧಿಕಾರಿಗಳ ಜಂಟಿ ಸಮಿತಿ ಮಾಡಿದ್ದೇವೆ. ಪೌರಕಾರ್ಮಿಕರ ಸಂರಕ್ಷಣೆ, ಹೆಲ್ತ್, ಶಿಕ್ಷಣದ ಬಗ್ಗೆ ಕಾನೂನು ಕಾನೂನನ್ನು ರಚನೆ ಮಾಡಬೇಕು. ಮುಂದಿನ ಅಧಿವೇಶನದಲ್ಲಿ ಈ ವಿಚಾರ ಪ್ರಸ್ತಾಪ ಮಾಡುತ್ತೇನೆ ಎಂದರು.coronavirus-vaccine-tough-action-home-minister-basavaraja-bommai

ಹೈದರಾಬಾದ್ ನಲ್ಲಿ ನಡೆಯುವ ಕಾರ್ಯಕಾರಿಣಿಯಲ್ಲಿ ಭಾಗವಹಿಸುತ್ತೇನೆ.  ನಾಳೆ ಸಂಜೆ ಹೈದರಾಬಾದ್​ನಿಂದ ಬೆಂಗಳೂರಿಗೆ ಹಿಂದಿರುಗುತ್ತೇನೆ. ರಾಷ್ಟ್ರದ ಎಲ್ಲಾ ನಾಯಕರು ಕಾರ್ಯಕಾರಿಣಿಗೆ ಆಗಮಿಸುತ್ತಾರೆ. ಸಮಯ ​ಸಿಕ್ಕರೆ ಅಮಿತ್ ಶಾ ಅವರೊಂದಿಗೆ ಮಾತನಾಡುತ್ತೇನೆ. ಅಮಿತ್ ಶಾ, ಜೆಪಿ ನಡ್ಡಾರನ್ನ ಭೇಟಿಯಾಗಲು ಯತ್ನಿಸುತ್ತೇನೆ ಎಂದು ತಿಳಿಸಿದರು.

Key words: civil worker-protection-health-education-CM Basavaraja Bommai.